ಮುಂಬೈ ವಿರುದ್ಧ ನಿಧಾನಗತಿಯ ಓವರ್ ರೇಟ್: ಸ್ಟೀವನ್ ಸ್ಮಿತ್‌ಗೆ 12 ಲಕ್ಷ ರೂ. ದಂಡ
ಮಂಗಳವಾರ ರಾತ್ರಿ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 57 ರನ್‌ಗಳ ಭಾರಿ ಅಂತರದಲ್ಲಿ ರಾಜಸ್ಥಾನ ರಾಯಲ್ಸ್ ಸೋಲು ಅನುಭವಿಸಿತ್ತು. ಆ ಮೂಲಕ ಹದಿಮೂರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಜಸ್ಥಾನ್ ರಾಯಲ್ಸ್ ಹ್ಯಾಟ್ರಿಕ್ ಪರಾಭವ ಅನುಭವಿಸಿತು.

ನವದೆಹಲಿ: ಮಂಗಳವಾರ ರಾತ್ರಿ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 57 ರನ್‌ಗಳ ಭಾರಿ ಅಂತರದಲ್ಲಿ ರಾಜಸ್ಥಾನ ರಾಯಲ್ಸ್ ಸೋಲು ಅನುಭವಿಸಿತ್ತು. ಆ ಮೂಲಕ ಹದಿಮೂರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಜಸ್ಥಾನ್ ರಾಯಲ್ಸ್ ಹ್ಯಾಟ್ರಿಕ್ ಪರಾಭವ ಅನುಭವಿಸಿತು.
ಮುಂಬೈ ಇಂಡಿಯನ್ಸ್ ಇನಿಂಗ್ಸ್‌ನಲ್ಲಿ ನಿಧಾನಗತಿಯ ಬೌಲಿಂಗ್ ಮಾಡಿದ ಕಾರಣದಿಂದ ರಾಜಸ್ಥಾನ್ ರಾಯಲ್ಸ್ ತಂಡ ನಾಯಕ ಸ್ಟೀವನ್ ಸ್ಮಿತ್‌ಗೆ ದಂಡ ವಿಧಿಸಲಾಗಿದೆ. 20 ಓವರ್‌ಗಳನ್ನು ರಾಜಸ್ಥಾನ್ ರಾಯಲ್ಸ್ ನಿಗದಿತ ಸಮಯದಲ್ಲಿ ಮುಗಿಸಿಲ್ಲ. ಪ್ರಸ್ತುತ ಆವೃತ್ತಿಯು ಸ್ಮಿತ್ ಪಡೆಗೆ ಮೊದಲ ನಿಧಾನಗತಿಯ ಓವರ್ ಅಪರಾಧವಾಗಿದೆ. ಈ ಹಿನ್ನೆಲೆಯಲ್ಲಿ ಸ್ಟೀವನ್ ಸ್ಮಿತ್‌ಗೆ 12 ಲಕ್ಷ ರೂ. ದಂಡವನ್ನು ವಿಧಿಸಲಾಗಿದೆ.
"ಕನಿಷ್ಠ ಓವರ್-ರೇಟ್ ಅಪರಾಧಗಳಿಗೆ ಸಂಬಂಧಿಸಿದ ಐಪಿಎಲ್ ನ ನೀತಿ ಸಂಹಿತೆಯ ಅಡಿಯಲ್ಲಿ ಇದು ತಂಡದ ಮೊದಲ ಅಪರಾಧವಾದ್ದರಿಂದ, ನಾಯಕ ಸ್ಟೀವನ್ ಸ್ಮಿತ್ ಅವರಿಗೆ 12 ಲಕ್ಷ ರೂ. ದಂಡ ವಿಧಿಸಲಾಯಿತು" ಎಂದು ಐಪಿಎಲ್ ಮಾಧ್ಯಮ ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


