ಕ್ರಿಸ್ ಮೋರಿಸ್ ಮರಳುವಿಕೆಯಿಂದ ಬೌಲಿಂಗ್ ವಿಭಾಗಕ್ಕೆ ಬಲ ಬಂದಿದೆ: ವಿರಾಟ್ ಕೊಹ್ಲಿ
ಕಳೆದ ಎರಡು ಪಂದ್ಯಗಳಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನ ತೋರಿದ ದಕ್ಷಿಣ ಆಫ್ರಿಕಾದ ಸ್ಟಾರ್ ಆಲ್‌ರೌಂಡರ್ ಕ್ರಿಸ್ ಮೋರಿಸ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಯಕ ವಿರಾಟ್ ಕೊಹ್ಲಿ ಶ್ಲಾಘಿಸಿದ್ದಾರೆ. ಬಲಗೈ ವೇಗಿ ಆರ್‌ಸಿಬಿ ಕೂಡಿಕೊಂಡಿದ್ದರಿಂದ ಬೌಲಿಂಗ್ ವಿಭಾಗದ ಬಲ ಇನ್ನಷ್ಟು ಹೆಚ್ಚಾಗಿದೆ ಎಂದು ಹೇಳಿದ್ದಾರೆ.

ಶಾರ್ಜಾ : ಕಳೆದ ಎರಡು ಪಂದ್ಯಗಳಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನ ತೋರಿದ ದಕ್ಷಿಣ ಆಫ್ರಿಕಾದ ಸ್ಟಾರ್ ಆಲ್‌ರೌಂಡರ್ ಕ್ರಿಸ್ ಮೋರಿಸ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಯಕ ವಿರಾಟ್ ಕೊಹ್ಲಿ ಶ್ಲಾಘಿಸಿದ್ದಾರೆ. ಬಲಗೈ ವೇಗಿ ಆರ್‌ಸಿಬಿ ಕೂಡಿಕೊಂಡಿದ್ದರಿಂದ ಬೌಲಿಂಗ್ ವಿಭಾಗದ ಬಲ ಇನ್ನಷ್ಟು ಹೆಚ್ಚಾಗಿದೆ ಎಂದು ಹೇಳಿದ್ದಾರೆ.
ಸೋಮವಾರ ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಹದಿಮೂರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್‌ನ 28ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಸಂಘಟಿತ ಪ್ರದರ್ಶನದ ನೆರವಿನಿಂದ ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು 82 ರನ್‌ಗಳಿಂದ ಪರಾಭವಗೊಳಿಸಿತು. ಆಮೂಲಕ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿತು.
ಶುಭಮನ್ ಗಿಲ್ ಬಿಟ್ಟರೆ ಇನ್ನುಳಿದ ಯಾವೊಬ್ಬ ಬ್ಯಾಟ್ಸ್‌ಮನ್ ಆರ್‌ಸಿಬಿ ಬೌಲರ್‌ಗಳನ್ನು ಸಮರ್ಥವಾಗಿ ಎದುರಿಸುವಲ್ಲಿ ಸಾಧ್ಯವಾಗಲಿಲ್ಲ. ಅಂತಿಮವಾಗಿ ಕೆಕೆಆರ್ ನಿಗದಿತ 20 ಓವರ್‌ಗಳಿಗೆ 9 ವಿಕೆಟ್‌ಗಳನ್ನು ಕಳೆದುಕೊಂಡು 112 ರನ್‌ಗಳಿಗೆ ಸೀಮಿತವಾಯಿತು. ಈ ಪಂದ್ಯದಲ್ಲೂ ಅದ್ಭುತ ಬೌಲಿಂಗ್ ಪ್ರದರ್ಶನ ತೋರಿದ ಕ್ರಿಸ್ ಮೋರಿಸ್ ಎರಡು ವಿಕೆಟ್‌ಗಳನ್ನು ಕಬಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


