ಐಪಿಎಲ್ 2020: ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ 8 ವಿಕೆಟ್ ಗಳ ಭರ್ಜರಿ ಜಯ
ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ತಂಡ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

ನವದೆಹಲಿ: ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ತಂಡ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.
ಕೋಲ್ಕತಾ ನೈಟ್ ರೈಡರ್ಸ್ ತಂಡ ನೀಡಿದ 149ರನ್ ಗಳ ಸಾಧಾರಣ ಗುರಿಯನ್ನು ಬೆನ್ನು ಹತ್ತಿದ ಮುಂಬೈ ಇಂಡಿಯನ್ಸ್ ತಂಡ ಇನ್ನೂ 19 ಎಸೆತಗಳು ಬಾಕಿ ಇರುವಂತೆಯೇ ತಲುಪಿತು. ಆ ಮೂಲಕ ಮುಂಬೈ ಇಂಡಿಯನ್ಸ್ ತಂಡ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿತು.
ಕೆಕೆಆರ್ ಬೌಲರ್‌ಗಳೆದುರು ಲೀಲಾಜಾಲವಾಗಿ ಬ್ಯಾಟ್ ಬೀಸಿದ ಕ್ವಿಂಟನ್ ಡಿ ಕಾಕ್ ಮತ್ತು ನಾಯಕ ರೋಹಿತ್ ಶರ್ಮಾ ಅವರ ಆಟದ ನೆರವಿನಿಂದ ಮುಂಬೈ ತಂಡ 16.5 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 149 ರನ್ ಗಳಿಸಿತು. ಬಿರುಸಾಗಿ ಬ್ಯಾಟ್ ಬೀಸಿದ ಕ್ವಿಂಟನ್ ಕೇವಲ 44 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 9 ಬೌಂಡರಿ ಸಹಿತ 78 ರನ್ ಬಾರಿಸಿದರು.
ಇದಕ್ಕೂ ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತಾ ತಂಡ ಇಯಾನ್ ಮಾರ್ಗನ್ ರ ಅಜೇಯ 39 ರನ್ ಮತ್ತು ಪ್ಯಾಟ್ ಕಮಿನ್ಸ್ ರ ಅಜೇಯ 53 ರನ್ ಗಳ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 148 ರನ್ ಗಳನ್ನು ಗಳಿಸಿತು.
ಇದು ಮುಂಬೈಗೆ ಟೂರ್ನಿಯಲ್ಲಿ 6ನೇ ಗೆಲುವು. 8 ಪಂದ್ಯಗಳನ್ನು ಆಡಿರುವ ಈ ತಂಡ 2 ಸೋಲು ಕಂಡಿದ್ದು, ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಕೆಕೆಆರ್ ನಾಲ್ಕನೇ ಸ್ಥಾನದಲ್ಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


