ಕ್ರಿಕೆಟ್

ಡಿಡಿಸಿಎ ನೂತನ ಅಧ್ಯಕ್ಷರಾಗಿ ಅರುಣ್ ಜೇಟ್ಲಿ ಪುತ್ರ ರೋಹನ್ ಜೇಟ್ಲಿ ಅವಿರೋಧ ಆಯ್ಕೆ

ಮಾಜಿ ಕೇಂದ್ರ ಸಚಿವ ದಿವಂಗತ ಅರುಣ್ ಜೇಟ್ಲಿಯವರ ಪುತ್ರ ರೋಹನ್ ಜೇಟ್ಲಿ ಅವರು ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆ(ಡಿಡಿಸಿಎ)ಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಡಿಡಿಸಿಎ ನೂತನ ಅಧ್ಯಕ್ಷರಾಗಿ ಅರುಣ್ ಜೇಟ್ಲಿ ಪುತ್ರ ರೋಹನ್ ಜೇಟ್ಲಿ ಅವಿರೋಧ ಆಯ್ಕೆ
ರೋಹನ್ ಜೇಟ್ಲಿ
Published On :

ನವದೆಹಲಿ: ಮಾಜಿ ಕೇಂದ್ರ ಸಚಿವ ದಿವಂಗತ ಅರುಣ್ ಜೇಟ್ಲಿಯವರ ಪುತ್ರ ರೋಹನ್ ಜೇಟ್ಲಿ ಅವರು ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆ(ಡಿಡಿಸಿಎ)ಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಡಿಡಿಸಿಎ ಚುನಾವಣೆಗೆ ನೇಮಕಗೊಂಡ ರಿಟರ್ನಿಂಗ್ ಅಧಿಕಾರಿ ಎಸ್.ಕೆ.ಮೆಂಡಿರಟ್ಟಾ ಅವರು ಶನಿವಾರ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಅಧ್ಯಕ್ಷ ಹುದ್ದೆಗೆ ರೋಹನ್ ಜೇಟ್ಲಿಯನ್ನು ಮಾತ್ರ ಹೆಸರಿಸಲಾಗಿದೆ.

ಅಧ್ಯಕ್ಷ ಸ್ಥಾನಕ್ಕೆ ರೋಹನ್ ಜೇಟ್ಲಿ ವಿರುದ್ಧ ನಾಮಪತ್ರ ಸಲ್ಲಿಸಿದ್ದ ವಕೀಲ ಸುನಿಲ್ ಕುಮಾರ್ ಗೋಯೆಲ್ ಅವರು ನಿರೀಕ್ಷೆಯಂತೆ ತಮ್ಮ ಉಮೇದುವಾರಿಕೆಯನ್ನು ಹಿಂತೆಗೆದುಕೊಂಡರು.

ನಂತರ ಅಧ್ಯಕ್ಷ ಹುದ್ದೆಗೆ ಒಬ್ಬ ಅಭ್ಯರ್ಥಿ ಮಾತ್ರ ಇರುವುದರಿಂದ ಅಧ್ಯಕ್ಷ ಸ್ಥಾನಕ್ಕೆ ಯಾವುದೇ ಚುನಾವಣೆ ಇರುವುದಿಲ್ಲ ಎಂದು ರಿಟರ್ನಿಂಗ್ ಅಧಿಕಾರಿ ತಿಳಿಸಿದ್ದಾರೆ.

ಖಜಾಂಚಿ ಮತ್ತು ನಾಲ್ಕು ನಿರ್ದೇಶಕರ ಹುದ್ದೆಗಳಿಗೆ ನವೆಂಬರ್ 5 ರಿಂದ 8 ರವರೆಗೆ ಚುನಾವಣೆ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.