ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 125 ರನ್ ಗಳಿಗೆ ಕಟ್ಟಿ ಹಾಕಿದ ರಾಜಸ್ಥಾನ್ ಬೌಲರ್ ಗಳು
ರಾಜಸ್ಥಾನ್ ರಾಯಲ್ಸ್ ತಂಡದ ಬಿಗಿಯಾದ ಬೌಲಿಂಗ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಇಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 125 ರನ್ ಗಳಿಗೆ ಕಟ್ಟಿ ಹಾಕಿದೆ.

ರಾಜಸ್ಥಾನ್ ರಾಯಲ್ಸ್ ತಂಡದ ಬಿಗಿಯಾದ ಬೌಲಿಂಗ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಇಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 125 ರನ್ ಗಳಿಗೆ ಕಟ್ಟಿ ಹಾಕಿದೆ.
ಆರಂಭದಿಂದಲೂ ಆರ್ ಆರ್ ತಂಡದ ಬೌಲಿಂಗ್ ಗೆ ಸಿಎಸ್ ಕೆ ತಂಡದ ಬ್ಯಾಟ್ಸ್ ಮನ್ ಗಳು ರನ್ ಕದಿಯಲು ಹರಸಾಹಸ ಪಟ್ಟರು.
ನೂರು ರನ್ ಗಳ ಗಡಿ ದಾಟುವ ಮೊದಲೇ ಚೆನ್ನೈ ಸೂಪರ್ ಕಿಂಗ್ಸ್ ಪ್ರಮುಖ ನಾಲ್ಕು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದಾಗ ಎಂಎಸ್ ಧೋನಿ ಹಾಗೂ ರವೀಂದ್ರ ಜಡೇಜಾ ತಂಡಕ್ಕೆ ಚೇತರಿಕೆಯಾಗಿ ನಿಂತರು ಆದರೆ ಈ ಜೊತೆಯಾಟವೂ ಸಹ ಹೆಚ್ಚು ಸಮಯ ಕ್ರೀಸ್ ನಲ್ಲಿ ಉಳಿಯಲಿಲ್ಲ. ಎಂಎಸ್ ಧೋನಿ 28 ಎಸೆತ ಗಳಲ್ಲಿ 28 ರನ್ ಗಳಿಸಿ ರನ್ ಔಟ್ ಗೆ ಗುರಿಯಾಗಿ ಪೆವಿಲಿಯನ್ ನತ್ತ ನಡೆದರು.
ಆರ್ ಆರ್ ತಂಡದ ಪರ ಜೋಫ್ರಾ ಆರ್ಚರ್, ಕಾರ್ತಿಕ್ ತ್ಯಾಗಿ, ಶ್ರೇಯಸ್ ಗೋಪಾಲ್, ರಾಹುಲ್ ತೆವಾಟಿಯಾ ತಲಾ ಒಂದು ವಿಕೆಟ್ ಗಳಿಸಿದರು. ರಾಹುಲ್ ತೆವಾಟಿಯಾ 4 ಓವರ್ ಗಳಲ್ಲಿ 18 ರನ್ ನೀಡಿ ಒಂದು ವಿಕೆಟ್, ಶ್ರೇಯಸ್ ಗೋಪಾಲ್ ನಾಲ್ಕು ಓವರ್ ಗಳಲ್ಲಿ 14 ರನ್ ನೀಡಿ ಒಂದು ವಿಕೆಟ್ ಪಡೆದು ಅತ್ಯುತ್ತಮ ಬೌಲರ್ ಎನಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


