ಐಪಿಎಲ್-2020: ಹೈದರಾಬಾದ್ ತಂಡಕ್ಕೆ ಗೆಲ್ಲಲು 155 ರನ್ ಗಳ ಗುರಿ
ಐಪಿಎಲ್-2020 ರ 40 ನೇ ಪಂದ್ಯದಲ್ಲಿ ಹೈದರಾಬಾದ್ ಸನ್ ರೈಸರ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದ್ದು, ಹೈದರಾಬಾದ್ ತಂಡಕ್ಕೆ ಆರ್ ಆರ್ 155 ರನ್ ಗಳ ಸವಾಲನ್ನು ಒಡ್ಡಿದೆ.

ಐಪಿಎಲ್-2020 ರ 40 ನೇ ಪಂದ್ಯದಲ್ಲಿ ಹೈದರಾಬಾದ್ ಸನ್ ರೈಸರ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದ್ದು, ಹೈದರಾಬಾದ್ ತಂಡಕ್ಕೆ ಆರ್ ಆರ್ 155 ರನ್ ಗಳ ಸವಾಲನ್ನು ಒಡ್ಡಿದೆ.
ನಿಗದಿತ 20 ಓವರ್ ಗಳಲ್ಲಿ ಆರ್ ಆರ್ ತಂಡ 6 ವಿಕೆಟ್ ನಷ್ಟಕ್ಕೆ 154 ರನ್ ಗಳನ್ನು ಗಳಿಸಿತು. ಸ್ಟೀವ್ ಸ್ಮಿತ್ ನೇತೃತ್ವದ ಆರ್ ಆರ್ ತಂಡ 10 ಐಪಿಎಲ್ ಪಂದ್ಯಗಳಲ್ಲಿ ನಾಲ್ಕು ಪಂದ್ಯಗಳನ್ನು ಗೆದ್ದು 6 ನೇ ಸ್ಥಾನದಲ್ಲಿದೆ.
ಡೇವಿಡ್ ವಾರ್ನರ್ ನೇತೃತ್ವದ ಸನ್ ರೈಸರ್ಸ್ ಹೈದರಾಬಾದ್ 9 ಪಂದ್ಯಗಳನ್ನಾಡಿದ್ದು 3 ಪಂದ್ಯಗಳನ್ನು ಗೆದ್ದು 7 ನೇ ಸ್ಥಾನದಲ್ಲಿದೆ. ಎರಡೂ ತಂಡಗಳಿಗೂ ಗೆಲುವು ಮಹತ್ವದ್ದಾಗಿದೆ. ಅ.11 ರಂದು ನಡೆದಿದ್ದ ಪಂದ್ಯದಲ್ಲಿ ಆರ್ ಆರ್ ತಂಡ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 5 ವಿಕೆಟ್ ಗಳ ಗೆಲುವು ಸಾಧಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


