ಐಪಿಎಲ್ 2020: ಆರ್ ಸಿಬಿ ಮಣಿಸಿದ ಚೆನ್ನೈ, ಪ್ಲೇಆಫ್ ಆಸೆ ಇನ್ನೂ ಜೀವಂತ
ರುತುರಾಜ್ ಗಾಯಕ್ವಾಡ್(ಅಜೇಯ 59 ರನ್, 50 ಎಸೆತ) ಮತ್ತು ಅಂಬಾಟಿ ರಾಯುಡು(39 ರನ್ , 27 ಎಸೆತ) ಅವರ ಅದ್ಭುತ ಬ್ಯಾಟಿಂಗ್ ಜತೆಗೆ ಬೌಲರ್ ಗಳ ಸಂಘಟಿತ ಪ್ರದರ್ಶನದ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡ...

ದುಬೈ: ರುತುರಾಜ್ ಗಾಯಕ್ವಾಡ್(ಅಜೇಯ 59 ರನ್, 50 ಎಸೆತ) ಮತ್ತು ಅಂಬಾಟಿ ರಾಯುಡು(39 ರನ್ , 27 ಎಸೆತ) ಅವರ ಅದ್ಭುತ ಬ್ಯಾಟಿಂಗ್ ಜತೆಗೆ ಬೌಲರ್ ಗಳ ಸಂಘಟಿತ ಪ್ರದರ್ಶನದ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಐಪಿಎಲ್ 13ನೇ ಆವೃತ್ತಿಯ 44ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 8 ವಿಕೆಟ್ ಗಳಿಂದ ಮಣಿಸಿ ತನ್ನ ಪ್ಲೇಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.
ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಬೆಂಗಳೂರು ತಂಡ, ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 145 ರನ್ ಗಳಿಸಿತು.
ಆರ್ ಸಿಬಿಯ 145 ರನ್ ಗಳ ಗುರಿ ಬೆನ್ನಟ್ಟಿದ ಚೆನ್ನೈ ತಂಡ 8 ಎಸೆತಗಳು ಬಾಕಿ ಇರುವಂತೆಯೇ 2 ವಿಕೆಟ್ ನಷ್ಟಕ್ಕೆ 150 ರನ್ ಗಳಿಸಿ ಜಯದ ನಗೆ ಬೀರಿತು.
ರುತುರಾಜ್ ಅವರು ಎರಡು ಸಿಕ್ಸರ್, ಮೂರು ಬೌಂಡರಿಯೊಂದಿಗೆ ಐಪಿಎಲ್ನ ಮೊದಲ ಅರ್ಧಶತಕ ಪೂರೈಸಿದರು. ಈ ಹಂತದಲ್ಲಿ ಜೊತೆಗೂಡಿದ ನಾಯಕ ಧೋನಿ ಉತ್ತಮ ಆಟ ಪ್ರದರ್ಶಿಸಿದರು. ಅದರಂತೆ 18. 4 ಓವರ್ನಲ್ಲಿ 2 ವಿಕೆಟ್ ಕಳೆದುಕೊಂಡು ಗೆಲುವಿನ ಗುರಿ ಮುಟ್ಟಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


