ಆರ್‌ಸಿಬಿಗೆ ಆಘಾತ: ವೇಗಿ ನವದೀಪ್ ಸೈನಿಗೆ ಗಾಯ, ಮುಂದಿನ ಪಂದ್ಯಕ್ಕೆ ಅನುಮಾನ
ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ತಂಡದ ವೇಗದ ಬೌಲರ್ ನವದೀಪ್ ಸೈನಿ ಗಾಯಗೊಂಡಿದ್ದು, ಮುಂದಿನ ಪಂದ್ಯದಲ್ಲಿ ಅವರು ಆಡುವುದು ಅನುಮಾನಾಸ್ಪದವಾಗಿದೆ.

ದುಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ತಂಡದ ವೇಗದ ಬೌಲರ್ ನವದೀಪ್ ಸೈನಿ ಗಾಯಗೊಂಡಿದ್ದು, ಮುಂದಿನ ಪಂದ್ಯದಲ್ಲಿ ಅವರು ಆಡುವುದು ಅನುಮಾನಾಸ್ಪದವಾಗಿದೆ.
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಸೈನಿ ಬಲಗೈಗೆ ಪೆಟ್ಟು ಬಿದ್ದು, ಅಕ್ಟೋಬರ್ 28ರಂದು ಮುಂಬೈ ಇಂಡಿಯನ್ಸ್ ವಿರುದ್ಧದ ಮುಂದಿನ ಪಂದ್ಯದಲ್ಲಿ ಇವರು ಆಡುವುದು ಅನುಮಾನ ಎನ್ನಲಾಗಿದೆ.
ಚೆನ್ನೈ ವಿರುದ್ಧದ ಪಂದ್ಯದ ಇನ್ನಿಂಗ್ಸ್‌ನ 18ನೇ ಓವರ್‌ನ ಕೊನೆಯ ಎಸೆತದಲ್ಲಿ ಬ್ಯಾಟ್ಸ್‌ಮನ್ ಹೊಡೆತವನ್ನು ನಿಲ್ಲಿಸಲು ಮುಂದಾಗಿ ಸೈನಿ ಗಾಯಗೊಂಡರು, ನಂತರ ಅವರು ಮೈದಾನದಿಂದ ಹೊರ ನಡೆದಿದ್ದರು.
ಐಪಿಎಲ್ 13ನೇ ಆವೃತ್ತಿಯಲ್ಲಿ ಆರ್‌ಸಿಬಿ ಅತ್ಯುತ್ತಮ ಪ್ರದರ್ಶನ ನೀಡುತ್ತಿದೆ. ಇನ್ನು 11 ಪಂದ್ಯಗಳ ಪೈಕಿ 7 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು 14 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


