ನಾನು ತುಂಬಾ ಆರೋಗ್ಯವಾಗಿದ್ದೇನೆ: ವಿಡಿಯೋದಲ್ಲಿ ಹರ್ಷ ವ್ಯಕ್ತಪಡಿಸಿದ ಕಪಿಲ್ ದೇವ್
ಆಂಜಿಯೋಪ್ಲ್ಯಾಸ್ಟಿ ಮಾಡಿಸಿಕೊಂಡ ಒಂದು ವಾರದ ನಂತರ ವಿಡಿಯೋವೊಂದನ್ನು ಪೋಸ್ಟ್ ಮಾಡಿರುವ ಕ್ರಿಕೆಟ್ ದಿಗ್ಗಜ ಕಪಿಲ್ ದೇವ್ ಅವರು, ತಾವು ತುಂಬಾ ಆರೋಗ್ಯವಾಗಿದ್ದು, ಶೀಘ್ರದಲ್ಲೇ ಎಲ್ಲರನ್ನು ಭೇಟಿಯಾಗಲು ಉತ್ಸುಕರಾಗಿರುವುದಾಗಿ ಹೇಳಿದ್ದಾರೆ.

ನವದೆಹಲಿ: ಆಂಜಿಯೋಪ್ಲ್ಯಾಸ್ಟಿ ಮಾಡಿಸಿಕೊಂಡ ಒಂದು ವಾರದ ನಂತರ ವಿಡಿಯೋವೊಂದನ್ನು ಪೋಸ್ಟ್ ಮಾಡಿರುವ ಕ್ರಿಕೆಟ್ ದಿಗ್ಗಜ ಕಪಿಲ್ ದೇವ್ ಅವರು, ತಾವು ತುಂಬಾ ಆರೋಗ್ಯವಾಗಿದ್ದು, ಶೀಘ್ರದಲ್ಲೇ ಎಲ್ಲರನ್ನು ಭೇಟಿಯಾಗಲು ಉತ್ಸುಕರಾಗಿರುವುದಾಗಿ ಹೇಳಿದ್ದಾರೆ.
1983ರಲ್ಲಿ ಚೊಚ್ಚಲ ವಿಶ್ವಕಪ್ ತಂದುಕೊಟ್ಟಿದ್ದ ಮಾಜಿ ನಾಯಕ ಕಪಿಲ್ ದೇವ್ ಅವರು ಹಠಾತ್ ಎದೆ ನೋವಿನಿಂದ ಶುಕ್ರವಾರ ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿ, ಆಂಜಿಯೋಪ್ಲ್ಯಾಸ್ಟಿಗೆ ಒಳಗಾಗಿದ್ದರು.
ಇಂದು ವಿಡಿಯೋವೊಂದನ್ನು ಪೋಸ್ಟ್ ಮಾಡಿರುವ ಕಪಿಲ್ ದೇವ್, 83 ಕುಟುಂಬ. ಹವಾಮಾನ ತುಂಬಾ ಆಹ್ಲಾದಕರವಾಗಿದೆ ಮತ್ತು ನಿಮ್ಮೆಲ್ಲರನ್ನು ಭೇಟಿ ಮಾಡಲು ನಾನು ತುಂಬಾ ಉತ್ಸುಕನಾಗಿದ್ದೇನೆ. ನಾನು ಈಗ ತುಂಬಾ ಆರೋಗ್ಯವಾಗಿದ್ದೇನೆ. ನಿಮ್ಮ ಶುಭ ಹಾರೈಕೆ ಮತ್ತು ಕಾಳಜಿಗೆ ಧನ್ಯವಾದಗಳು ಎಂದು ಕಪಿಲ್ ದೇವ್ ಅವರು 1983ರ ಭಾರತ ತಂಡದ ಸಹ ಆಟಗಾರರೊಂದಿಗೆ ಹಂಚಿಕೊಂಡ ವಿಡಿಯೋದಲ್ಲಿ ಹೇಳಿದ್ದಾರೆ.
"ನಾವೆಲ್ಲರೂ ಬಹಳ ಬೇಗನೆ ಭೇಟಿಯಾಗುತ್ತೇವೆ ಎಂದು ಆಶಿಸುತ್ತಿದ್ದೇನೆ. ಸಾಧ್ಯವಾದಷ್ಟು ಬೇಗ ನಿಮ್ಮೆಲ್ಲರನ್ನೂ ಭೇಟಿಯಾಗಲು ಪ್ರಯತ್ನಿಸುತ್ತೇನೆ. ನಾವು ವರ್ಷದ ಅಂತ್ಯವನ್ನು ತಲುಪಿದ್ದೇವೆ ಮತ್ತು ಮುಂದಿನ ವರ್ಷಕ್ಕೆ ನಾವು ಉತ್ತಮ ಆರಂಭವನ್ನು ಪಡೆಯುತ್ತೇವೆ ಎಂಬ ವಿಶ್ವಾಸವಿದೆ. ಲವ್ ಯು ಆಲ್" ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


