ಐಪಿಎಲ್ 2020: ಜಡೇಜಾ ಆರ್ಭಟ, ಕೋಲ್ಕತ್ತಾ ವಿರುದ್ಧ ಚೆನ್ನೈಗೆ 6 ವಿಕೆಟ್ ಗೆಲುವು
ಐಪಿಎಲ್ನ 49ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 6 ವಿಕೆಟ್ಗಳ ಜಯ ಸಾಧಿಸಿದೆ.

ದುಬೈ: ಐಪಿಎಲ್ನ 49ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 6 ವಿಕೆಟ್ಗಳ ಜಯ ಸಾಧಿಸಿದೆ.
ಗೆಲ್ಲಲು 173 ರನ್ಗಳ ಗುರಿ ಪಡೆದಿದ್ದ ಚೆನ್ನೈ 20 ಓವರ್ನಲ್ಲಿ 4 ವಿಕೆಟ್ ನಷ್ಟಕ್ಕೆ 178 ರನ್ ಗಳಿಸಿ ಜಯಭೇರಿ ಬಾರಿಸಿದೆ.
ಚೆನ್ನೈ ಪರ ರುತುರಾಜ್ 72, ಅಂಬಟಿ ರಾಯಡು 38, ಜಡೇಜಾ ಅಜೇಯ 31 ರನ್ ಗಳಿಸಿದ್ದರು. ಇನ್ನು ಎಂಎಸ್ ಧೋನಿ ಕೇವಲ 1 ರನ್ ಗಳಿಸಿದ್ದರೆ ಸ್ಯಾಮ್ ಕರನ್ 13, ಶೇನ್ ವಾಟ್ಸನ್ 14 ರನ್ ಕಲೆಹಾಕಿದ್ದರು.
ಕೋಲ್ಕತ್ತಾ ಪರ ಪಾಟ್ ಕಮ್ಮಿಸ್, ವರುಣ್ ಚಕ್ರವರ್ತಿ ತಲಾ 2 ವಿಕೆಟ್ ಪಡೆದುಕೊಂಡರು,
ಇದಕ್ಕೆ ಮುನ್ನ ಬ್ಯಾಟಿಂಗ್ ನಡೆಸಿದ್ದ ಕೋಲ್ಕತ್ತಾ 20 ಓವರ್ ಗಳಲ್ಲಿ ಲಿ 5 ವಿಕೆಟ್ ನಷ್ಟಕ್ಕೆ 172 ರನ್ ಗಳಿಸಿತ್ತು. ಕೋಲ್ಕತ್ತಾ ಪರವಾಗಿ ಶುಭ್ ಮನ್ ಗಿಲ್ 26, ನಿತೀಶ್ ರಾಣ 87, ಸುನಿಲ್ ನರೈನ್ 7, ರಿಂಕು ಸಿಂಗ್ 11, ಮಾರ್ಗನ್ 15, ದಿನೇಶ್ ಕಾರ್ತಿಕ್ 21 ರನ್ ಗಳೀಸಿದ್ದರು.
ಇದೇ ವೇಳೆ ಈ ಪಂದ್ಯವನ್ನು ಗೆದ್ದು ಪ್ಲೇ ಆಫ್ ಆಸೆ ಜೀವಂತವಾಗಿರಿಸಿಕೊಳ್ಳುವ ಕನಸಿನಲ್ಲಿದ್ದ ಕೆಕೆಆರ್ ತಂಡಕ್ಕೆ, ಸೂಪರ್ ಕಿಂಗ್ಸ್ ಪೆಟ್ಟು ನೀಡಿದ್ದರ ಜತೆಗೆ ಟೂರ್ನಿಯಲ್ಲಿ ಐದನೇ ಜಯ ದಾಖಲಿಸಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


