ರೋಹಿತ್ ಆಯ್ಕೆ ಮಾಡದ್ದಕ್ಕೆ ತೀವ್ರ ವಿರೋಧ: ನಾಳೆ ರೋ'ಹಿಟ್' ಫಿಟ್ ನೆಸ್ ಪರೀಕ್ಷೆ ನಡೆಸಲಿರುವ ಬಿಸಿಸಿಐ!
ಗಾಯದ ಸಮಸ್ಯೆಯನ್ನು ಉಲ್ಲೇಖಿಸಿ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಅವರನ್ನು ಮುಂಬರುವ ಆಸ್ಟ್ರೇಲಿಯಾ ಪ್ರವಾಸಕ್ಕೆ ಆಯ್ಕೆ ಮಾಡದಿರುವುದಕ್ಕೆ ಬಿಸಿಸಿಐ ವಿರುದ್ಧ ಟೀಕೆಗಳು ಕೇಳಿಬಂದಿತ್ತು.

ದುಬೈ: ಗಾಯದ ಸಮಸ್ಯೆಯನ್ನು ಉಲ್ಲೇಖಿಸಿ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಅವರನ್ನು ಮುಂಬರುವ ಆಸ್ಟ್ರೇಲಿಯಾ ಪ್ರವಾಸಕ್ಕೆ ಆಯ್ಕೆ ಮಾಡದಿರುವುದಕ್ಕೆ ಬಿಸಿಸಿಐ ವಿರುದ್ಧ ಟೀಕೆಗಳು ಕೇಳಿಬಂದಿತ್ತು.
ಬಿಸಿಸಿಐ ಆಯ್ಕೆ ಸಮಿತಿ ಬೇಕು ಅಂತೆ ರೋಹಿತ್ ಶರ್ಮಾ ಅವರನ್ನು ಆಸ್ಟ್ರೇಲಿಯಾ ಪ್ರವಾಸಕ್ಕೆ ಆಯ್ಕೆ ಮಾಡಿಲ್ಲ ಎಂದು ನೆಟಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ಇನ್ನು ತಂಡದ ಆಯ್ಕೆ ಸಂಬಂಧ ತೀವ್ರ ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಬಿಸಿಸಿಐ ವೈದ್ಯಕೀಯ ತಂಡ ನಾಳೆ ರೋಹಿತ್ ಶರ್ಮಾರ ಫಿಟ್ ನೆಸ್ ಪರೀಕ್ಷೆಯನ್ನು ನಡೆಸಲಿದೆ.
ಎಎನ್‌ಐಯೊಂದಿಗೆ ಮಾತನಾಡಿದ ಬಿಸಿಸಿಐ ಕಾರ್ಯಕರ್ತ, ಮುಂಬೈ ಇಂಡಿಯನ್ಸ್ ನಾಯಕನನ್ನು ಮೌಲ್ಯಮಾಪನ ಮಾಡಲಾಗುವುದು ಎಂದು ದೃಢಪಡಿಸಲಾಗುವುದು ಎಂದರು.
"ರೋಹಿತ್‌ರನ್ನು ನಾಳೆ ಫಿಟ್ ನೆಸ್ ಪರೀಕ್ಷೆ ನಡೆಸಲಾಗುವುದು. ನಂತರ ಅವರನ್ನು ಆಸ್ಟ್ರೇಲಿಯಾ ಪ್ರವಾಸಕ್ಕೆ ಕಳುಹಿಸುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು. ಮಂಡಿರಜ್ಜು ಗಾಯದ ಸಮಸ್ಯೆಯಿಂದ ರೋಹಿತ್ ಬಳಲುತ್ತಿರುವುದರಿಂದ ನಡೆಯುವುದು ಮತ್ತು ವೇಗವಾಗಿ ಓಡುವ ಪರೀಕ್ಷೆಗೆ ಒಳಪಡಿಸಲಾಗುವುದು ಎಂದರು.
ನವೆಂಬರ್ 27ರಿಂದ ಆಸ್ಟ್ರೇಲಿಯಾ ಪ್ರವಾಸ ಆರಂಭಗೊಳ್ಳಲಿದ್ದು ಈ ವೇಳೆ ರೋಹಿತ್ ಶರ್ಮಾ ಸರಣಿಯ ಭಾಗವಾಗುವುದು ಒಳ್ಳೆಯದು ಎಂಬ ಅಭಿಪ್ರಾಯಗಳು ಕೇಳಿ ಬರುತ್ತಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


