ಡೆಲ್ಲಿ ವಿರುದ್ಧ 9 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದ ಮುಂಬೈ
ವೇಗಿಗಳಾದ ಯಾರ್ಕರ್ ಸ್ಪೇಷಲಿಸ್ಟ್ ಜಸ್ ಪ್ರೀತ್ ಬುಮ್ರಾ(17ಕ್ಕೆ 3) ಮತ್ತು ಟ್ರೆಂಟ್ ಬೌಲ್ಟ್(21ಕ್ಕೆ 3) ಬಿಗುವಿನ ದಾಳಿಯ ನೆರವಿನಿಂದ ಮುಂಬೈ ಇಂಡಿಯನ್ಸ್ 13ನೇ ಆವೃತ್ತಿಯ ಐಪಿಎಲ್ ನ 51ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮಣಿಸಿ, ಅಗ್ರ ಸ್ಥಾನ ಬಲ ಪಡಿಸಿಕೊಂಡಿದೆ.

ದುಬೈ: ವೇಗಿಗಳಾದ ಯಾರ್ಕರ್ ಸ್ಪೇಷಲಿಸ್ಟ್ ಜಸ್ ಪ್ರೀತ್ ಬುಮ್ರಾ(17ಕ್ಕೆ 3) ಮತ್ತು ಟ್ರೆಂಟ್ ಬೌಲ್ಟ್(21ಕ್ಕೆ 3) ಬಿಗುವಿನ ದಾಳಿಯ ನೆರವಿನಿಂದ ಮುಂಬೈ ಇಂಡಿಯನ್ಸ್ 13ನೇ ಆವೃತ್ತಿಯ ಐಪಿಎಲ್ ನ 51ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮಣಿಸಿ, ಅಗ್ರ ಸ್ಥಾನ ಬಲ ಪಡಿಸಿಕೊಂಡಿದೆ.
ಮೊದಲು ಬ್ಯಾಟ್ ಮಾಡಿದ ಡೆಲ್ಲಿ 20 ಓವರ್ ಗಳಲ್ಲಿ 9 ವಿಕೆಟ್ ಗೆ 110 ರನ್ ಕಲೆ ಹಾಕಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ 14.2 ಓವರ್ ಗಳಲ್ಲಿ 1 ವಿಕೆಟ್ ಗೆ 111 ರನ್ ಸೇರಿಸಿ, ಟೂರ್ನಿಯಲ್ಲಿ ಒಂಬತ್ತನೇ ಜಯ ಸಾಧಿಸಿದ್ದು 18 ಅಂಕ ಕಲೆ ಹಾಕಿದೆ.
ಡೆಲ್ಲಿ ಕ್ಯಾಪಿಟಲ್ಸ್ ಪರ ಪೃಥ್ವಿ ಶಾ 10, ಶ್ರೇಯಸ್ ಅಯ್ಯರ್ 25, ರಿಷಬ್ ಪಂತ್ 21, ಹೆಟ್ಮರ್ 11 ರನ್ ಬಾರಿಸಿದ್ದಾರೆ. ಮುಂಬೈ ಪರ ಬೌಲಿಂಗ್ ನಲ್ಲಿ ಟ್ರೆಂಟ್ ಬೌಲ್ಟ್, ಜಸ್ ಪ್ರೀತ್ ಬುಮ್ರಾ ತಲಾ 3 ವಿಕೆಟ್ ಪಡೆದಿದ್ದಾರೆ.
ಮುಂಬೈ ಪರ ಕ್ವಿಂಟನ್ ಡಿ ಕಾಕ್ 26, ಇಶಾನ್ ಕಿಶನ್ ಅಜೇಯ 72 ಮತ್ತು ಸೂರ್ಯಕುಮಾರ್ ಯಾದವ್ ಅಜೇಯ 12 ರನ್ ಪೇರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


