ವಿಕೆಟ್ ಮರ್ಮ ಅರಿಯುವಲ್ಲಿ ಎಡವಿದ್ದೇವೆ: ಶ್ರೇಯಸ್ ಅಯ್ಯರ್
ಮುಂಬೈ ಇಂಡಿಯನ್ಸ್ ವಿರುದ್ಧ ಪಂದ್ಯದಲ್ಲಿ ವಿಕೆಟ್ ಮರ್ಮ ಅರಿಯುವಲ್ಲಿ ವಿಫಲರಾಗಿದ್ದೇವೆ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಶ್ರೇಯಸ್ ಅಯ್ಯರ್ ತಿಳಿಸಿದ್ದಾರೆ.

ದುಬೈ: ಮುಂಬೈ ಇಂಡಿಯನ್ಸ್ ವಿರುದ್ಧ ಪಂದ್ಯದಲ್ಲಿ ವಿಕೆಟ್ ಮರ್ಮ ಅರಿಯುವಲ್ಲಿ ವಿಫಲರಾಗಿದ್ದೇವೆ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಶ್ರೇಯಸ್ ಅಯ್ಯರ್ ತಿಳಿಸಿದ್ದಾರೆ.
ಮೊದಲು ಬ್ಯಾಟ್ ಮಾಡಿದ ಡೆಲ್ಲಿ 20 ಓವರ್ ಗಳಲ್ಲಿ 9 ವಿಕೆಟ್ ಗೆ 110 ರನ್ ಕಲೆ ಹಾಕಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ 14.2 ಓವರ್ ಗಳಲ್ಲಿ 1 ವಿಕೆಟ್ ಗೆ 111 ರನ್ ಸೇರಿಸಿ, ಟೂರ್ನಿಯಲ್ಲಿ 9 ಜಯ ಸಾಧಿಸಿದ್ದು, 18 ಅಂಕ ಕಲೆ ಹಾಕಿದ್ದಾರೆ.
ಮುಂಬೈ ವಿರುದ್ಧದ ಸೋಲಿನ ಬಳಿಕ ಮಾತನಾಡಿದ ಶ್ರೇಯಸ್, ವಿಕೆಟ್ ಮರ್ಮ ಅರಿಯುವಲ್ಲಿ ನಾವು ಎಡವಿದ್ದೇವೆ. ನಾವು ನಮ್ಮ ಕ್ಷಮತೆಗೆ ತಕ್ಕ ಪ್ರದರ್ಶನ ನೀಡಿಲಿಲ್ಲ. ಪವರ್ ಪ್ಲೇ ನಲ್ಲಿ ವಿಕೆಟ್ ಕಳೆದುಕೊಂಡಿದ್ದು ಪೆಟ್ಟು ಬಿದ್ದಿತು. ನಾವು ಜೊತೆಯಾಟಗಳನ್ನು ಮಾಡಲು ಬಯಸಿದ್ದೇವು. ಆದರೆ ಅದಾಗಲಿಲ್ಲ ಎಂದು ತಿಳಿಸಿದ್ದಾರೆ.
ನಮ್ಮ ಆಟದಲ್ಲಿ ನ್ಯೂನತೆಗಳು ಇವೆ. ಆರಂಭದಲ್ಲಿ ವಿಕೆಟ್ ಹೇಗೆ ವರ್ತಿಸಲಿದೆ ಎಂದು ಊಹಿಸಲು ಆಗಲಿಲ್ಲ. ಈ ವಿಕೆಟ್ ಗಳ ಮೇಲೆ 150 ರಿಂದ 160 ರನ್ ಕಲೆ ಹಾಕುವಲ್ಲಿ ಎಡವಿದ್ದೇವೆ. ಮುಂದಿನ ದಿನಗಳಲ್ಲಿ ಇಂದಿನ ಸೋಲನ್ನು ಮರೆತು ಆಡುತ್ತೇವೆ. ಮುಂದಿನ ಪಂದ್ಯ ನಮ್ಮ ಪಾಲಿಗೆ ಮಹತ್ವದಾಗಿದ್ದು, ಮಾಡು ಇಲ್ಲವೆ ಮಡಿ ಪಂದ್ಯವಾಗಿರಲಿದೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


