ಐಪಿಎಲ್ 2020: ಬಿಸಿಸಿಐಗೆ ಸೇರಿದ ಸದಸ್ಯರೊಬ್ಬರಿಗೆ ಕೋವಿಡ್-19 ಪಾಸಿಟಿವ್
ಸೆಪ್ಟೆಂಬರ್ 19ರಿಂದ ಆರಂಭವಾಗಿಲಿರುವ ಐಪಿಎಲ್ 2020 ಟೂರ್ನಿಗಾಗಿ ಯುಎಇಗೆ ತೆರಳಿರುವ ಬಿಸಿಸಿಐ ಅವಲಂಬಿತ ಸದಸ್ಯರೊಬ್ಬರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ನವದೆಹಲಿ: ಸೆಪ್ಟೆಂಬರ್ 19ರಿಂದ ಆರಂಭವಾಗಿಲಿರುವ ಐಪಿಎಲ್ 2020 ಟೂರ್ನಿಗಾಗಿ ಯುಎಇಗೆ ತೆರಳಿರುವ ಬಿಸಿಸಿಐ ಅವಲಂಬಿತ ಸದಸ್ಯರೊಬ್ಬರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಬಿಸಿಸಿಐ ಅವಲಂಬಿತ ಸದಸ್ಯರೊಬ್ಬರಿಗೆ ಪಾಸಿಟಿವ್ ಬಂದಿದೆ. ಅವರು ವೈದ್ಯಕೀಯ ತಂಡವೇ ಅಥವಾ ಕ್ರಿಕೆಟ್ ಕಾರ್ಯಾಚರಣೆ ತಂಡವೇ ಎಂಬುದನ್ನು ಹೇಳಲ್ಲ, ಆದರೆ, ಪರೀಕ್ಷೆ ಮಾಡಲಾಗುತ್ತಿದ್ದು, ಉಳಿದವರು ಆರೋಗ್ಯವಾಗಿದ್ದು, ಯಾವುದೇ ರೋಗ ಲಕ್ಷಣ ಕಂಡುಬಂದಿಲ್ಲ ಎಂದು ಹಿರಿಯ ಐಪಿಎಲ್ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಪಿಟಿಐ ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.
ಸದ್ಯಕ್ಕೆ ಅವರನ್ನು 14 ದಿನಗಳ ಕಾಲ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಯುಎಇಗೆ ತೆರಳಿದ್ದ ಚೆನ್ನೈ ಸೂಪರ್ ಕಿಂಗ್ಸ್ ನ ಇಬ್ಬರು ಆಟಗಾರಿಗೆ ಕೋರಾನಾ ಪಾಸಿಟಿವ್ ಕಂಡುಬಂದಿತ್ತು. ಇದೀಗ ಬಿಸಿಸಿಐಗೆ ಸೇರಿದ ಸದಸ್ಯರೊಬ್ಬರಿಗೆ ಕೋವಿಡ್-19 ಸೋಂಕು ಕಾಣಿಸಿಕೊಂಡಿದ್ದು, ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


