ಕ್ರಿಕೆಟ್

ಐಪಿಎಲ್ ನಿಂದ ಹೊರಗುಳಿಯಲು ನಿರ್ಧರಿಸಿದ ಹರ್ಭಜನ್ ಸಿಂಗ್

ಐಪಿಎಲ್ ನಿಂದ ಹೊರಗುಳಿಯಲು ಸಿಎಸ್ ಕೆಯ ಸ್ಪಿನ್ನರ್ ಹರ್ಭಜನ್ ಸಿಂಗ್ ನಿರ್ಧರಿಸಿದ್ದಾರೆ.

ಐಪಿಎಲ್ ನಿಂದ ಹೊರಗುಳಿಯಲು ನಿರ್ಧರಿಸಿದ ಹರ್ಭಜನ್ ಸಿಂಗ್
ಹರ್ಭಜನ್ ಸಿಂಗ್
Published On :

ಐಪಿಎಲ್ ನಿಂದ ಹೊರಗುಳಿಯಲು ಸಿಎಸ್ ಕೆಯ ಸ್ಪಿನ್ನರ್ ಹರ್ಭಜನ್ ಸಿಂಗ್ ನಿರ್ಧರಿಸಿದ್ದಾರೆ. 

ಯುಎಇಯಲ್ಲಿ ನಡೆಯುತ್ತಿರುವ ಈ ಬಾರಿಯ ಐಪಿಎಲ್ ನಲ್ಲಿ ಭಾಗವಹಿಸದೇ ಇರುವುದಕ್ಕೆ ಭಜ್ಜಿ ಕಾರಣ ತಿಳಿಸಿದ್ದಾರೆ. ವೈಯಕ್ತಿಕ ಕಾರಣಗಳಿಂದಾಗಿ ತಾವು ಐಪಿಎಲ್ ನಿಂದ ದೂರ ಉಳಿಯುತ್ತಿರುವುದಾಗಿ ಹರ್ಭಜನ್ ಸಿಂಗ್ ಹೇಳಿದ್ದಾರೆ. 

ಸಿಎಸ್ ಕೆ ಮ್ಯಾನೇಜ್ಮೆಂಟ್ ಗೂ ಸಹ ಹರ್ಭಜನ್ ಸಿಂಗ್ ತಮ್ಮ ನಿರ್ಧಾರವನ್ನು ತಿಳಿಸಿದ್ದಾರೆ. ಸೆ.19 ರಿಂದ ಐಪಿಎಲ್ ಪ್ರಾರಂಭವಾಗಲಿದೆ. 

ಈಗಾಗಲೇ ಸಿಎಸ್ ಕೆಯಿಂದ ರೈನಾ ಹೊರಗುಳಿದಿದ್ದರು. ದುಬೈ ನಲ್ಲಿ ಮೂರನೇ ಹಂತದ ಟೆಸ್ಟಿಂಗ್ ನಂತರ ಸಿಎಸ್ ಕೆ ನಾಯಕ ಮಹೇಂದ್ರ ಸಿಂಗ್ ಧೋನಿ ಸೇರಿದಂತೆ ಉಳಿದ ಎಲ್ಲಾ ಆಟಗಾರರು ತರಬೇತಿಯಲ್ಲಿ ಭಾಗಿಯಾಗಲಿದ್ದಾರೆ. ಸಿಎಸ್ ಕೆ ತಂಡಕ್ಕೆ ಸಂಬಂಧಪಟ್ಟ 13 ಸದಸ್ಯರಲ್ಲಿ ಕೊರೋನಾ ಸೋಂಕು ದೃಢಪಟ್ಟಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.