ಭಾನುವಾರ ಐಪಿಎಲ್ 2020 ವೇಳಾಪಟ್ಟಿ ಬಿಡುಗಡೆ: ಬ್ರಿಜೇಶ್ ಪಟೇಲ್
ಬಹುನಿರೀಕ್ಷಿತ 13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಟಿ-20 ಟೂರ್ನಿಯ ವೇಳಾಪಟ್ಟಿಯನ್ನು ನಾಳೆ ಅಂದರೆ ಭಾನುವಾರ ಬಿಡುಗಡೆ ಮಾಡಲಾಗುತ್ತದೆ ಎಂದು ಐಪಿಎಲ್ ಚೇರ್ಮನ್ ಬ್ರಿಜೇಶ್ ಪಟೇಲ್ ಹೇಳಿದ್ದಾರೆ.

ದುಬೈ: ಬಹುನಿರೀಕ್ಷಿತ 13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಟಿ-20 ಟೂರ್ನಿಯ ವೇಳಾಪಟ್ಟಿಯನ್ನು ನಾಳೆ ಅಂದರೆ ಭಾನುವಾರ ಬಿಡುಗಡೆ ಮಾಡಲಾಗುತ್ತದೆ ಎಂದು ಐಪಿಎಲ್ ಚೇರ್ಮನ್ ಬ್ರಿಜೇಶ್ ಪಟೇಲ್ ಹೇಳಿದ್ದಾರೆ.
ಈ ಕುರಿತಂತೆ ಸುದ್ದಿಸಂಸ್ಥೆಗೆ ಮಾಹಿತಿ ನೀಡಿರುವ ಅವರು, ಐಪಿಎಲ್ ಟೂರ್ನಿ ಆರಂಭಕ್ಕೆ ಬೇಕಾದ ಎಲ್ಲ ರೀತಿಯ ತಯಾರಿ ಪೂರ್ಣಗೊಂಡಿದ್ದು, ನಾಳೆ ಅಧಿಕೃತವಾಗಿ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಹಾಲಿ ವರ್ಷದ ಐಪಿಎಲ್ ಟೂರ್ನಿಯು ಸೆಪ್ಟಂಬರ್ 19ರಿಂದ ಆರಂಭವಾಗಿ ನವೆಂಬರ್ 10ರ ತನಕ ಯುಎಇಯ ದುಬೈ, ಅಬುಧಾಬಿ ಹಾಗೂ ಶಾರ್ಜಾಗಳಲ್ಲಿ ನಡೆಯಲಿದೆ. 53 ದಿನಗಳ ಕಾಲ ನಡೆಯಲಿರುವ ಐಪಿಎಲ್ ಟೂರ್ನಿಯು ಸೆ.19 ರಂದು ಪ್ರಾರಂಭವಾಗಿ ನ.10ರಂದು ಕೊನೆಗೊಳ್ಳಲಿದೆ. ತಮ್ಮ ನೆಚ್ಚಿನ ತಂಡಗಳು ಯಾವ ದಿನದಂದು ಆಡುತ್ತವೆ ಎಂದು ನೋಡಲು ಕ್ರಿಕೆಟ್ ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ.
ಭಾರತದಲ್ಲಿ ಆಯೋಜನೆಯಾಗಬೇಕಿದ್ದ ಐಪಿಎಲ್ ಟೂರ್ನಿ ಕೊರೋನಾ ಸಾಂಕ್ರಾಮಿಕದಿಂದಾಗಿ ಯುಎಇಗೆ ಶಿಫ್ಟ್ ಆಗಿತ್ತು. ಈಗಾಗಲೇ ಎಲ್ಲ ತಂಡಗಳು ಯುಎಇನಲ್ಲಿ ಬೀಡುಬಿಟ್ಟಿದ್ದು, ಟೂರ್ನಿಗೆ ತಯಾರಿ ನಡೆಸುತ್ತಿವೆ. ಏತನ್ಮಧ್ಯೆ ಐಪಿಎಲ್ ತಂಡಗಳಲ್ಲಿನ ಸಿಬ್ಬಂದಿಗಳು ಮತ್ತು ಆಟಗಾರರು ಕೊರೋನಾ ಸೋಂಕಿಗೆ ತುತ್ತಾಗುತ್ತಿರುವುದು ಫ್ರಾಂಚೈಸಿಗಳಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಅದಾಗ್ಯೂ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಆಟಗಾರರು ಮತ್ತು ಸಿಬ್ಬಂದಿಗಳ ಆರೋಗ್ಯದ ಮೇಲೆ ತೀವ್ರ ನಿಗಾ ಇಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


