ಐಪಿಎಲ್ 13ನೇ ಆವೃತ್ತಿ: ಆಟಗಾರರಿಗೆ ಕೋವಿಡ್-19 ಭೀತಿ ಕಾಡುವುದಿಲ್ಲ- ಗಂಭೀರ್ ವಿಶ್ವಾಸ
ಯುಎಇನಲ್ಲಿ ನಡೆಯಲಿರುವ ಐಪಿಎಲ್ ಟೂರ್ನಿಯಲ್ಲಿ ಪಾಲ್ಗೊಂಡಿರುವ ಆಟಗಾರರ ಕಾರ್ಯಕ್ಷಮತೆ ಮೇಲೆ ಕೊರೋನಾವೈರಸ್ ಸಾಂಕ್ರಾಮಿಕ ರೋಗವು ಯಾವುದೇ ರೀತಿಯ ಪರಿಣಾಮ ಬೀರಲ್ಲ ಎಂಬ ವಿಶ್ವಾಸ ಹೊಂದಿರುವುದಾಗಿ ಮಾಜಿ ಟೀಂ ಇಂಡಿಯಾ ಆಟಗಾರ ಗೌತಮ್ ಗಂಭೀರ್ ಹೇಳಿದ್ದಾರೆ.

ನವದೆಹಲಿ: ಯುಎಇನಲ್ಲಿ ನಡೆಯಲಿರುವ ಐಪಿಎಲ್ ಟೂರ್ನಿಯಲ್ಲಿ ಪಾಲ್ಗೊಂಡಿರುವ ಆಟಗಾರರ ಕಾರ್ಯಕ್ಷಮತೆ ಮೇಲೆ ಕೊರೋನಾವೈರಸ್ ಸಾಂಕ್ರಾಮಿಕ ರೋಗವು ಯಾವುದೇ ರೀತಿಯ ಪರಿಣಾಮ ಬೀರಲ್ಲ ಎಂಬ ವಿಶ್ವಾಸ ಹೊಂದಿರುವುದಾಗಿ ಮಾಜಿ ಟೀಂ ಇಂಡಿಯಾ ಆಟಗಾರ ಗೌತಮ್ ಗಂಭೀರ್ ಹೇಳಿದ್ದಾರೆ.
ಕೋವಿಡ್-19 ಮಾರ್ಗಸೂಚಿಗಳನ್ನು ಆಟಗಾರರು ಚಾಚು ತಪ್ಪದೇ ಪಾಲಿಸಬೇಕೆಂದು ದೆಹಲಿ ಕ್ಯಾಪಿಟಲ್ಸ್ ತಂಡದ ಮಾಜಿ ಕ್ಯಾಪ್ಟನ್ ಒತ್ತಾಯಿಸಿದ್ದಾರೆ.
ಕೋವಿಡ್-19ಗೆ ಆಟಗಾರರು ಹೆದರುತ್ತಾರೆ ಎಂಬುದು ನನ್ನಗೆ ಅನ್ನಿಸುತ್ತಿಲ್ಲ. ಮಾರ್ಗಸೂಚಿಗಳನ್ನು ಪಾಲಿಸುವುದು ಅತ್ಯಂತ ಪ್ರಮುಖವಾಗಿದೆ. ಒಬ್ಬ ವ್ಯಕ್ತಿಯ ಕಾರಣದಿಂದಾಗಿ ಇಡೀ ಟೂರ್ನಿಯನ್ನು ಹಾಳು ಮಾಡಬಾರದು, ಆದ್ದರಿಂದ ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಪಾಲಿಸುವುದು ಮುಖ್ಯವಾಗಿದೆ ಎಂದು ಎಎನ್ ಐ ಸುದ್ದಿಸಂಸ್ಥೆಗೆ ಗೌತಮ್ ಗಂಭೀರ್ ತಿಳಿಸಿದ್ದಾರೆ.
ಸೆಪ್ಟೆಂಬರ್ 19ರಿಂದ ನವೆಂಬರ್ 10ರವರೆಗೂ ಯುಎಇ, ಅಬುದಾಬಿ, ಶಾರ್ಜಾ ಮತ್ತು ದುಬೈನಲ್ಲಿ ಐಪಿಎಲ್ 13ನೇ ಆವೃತ್ತಿಯ ಲೀಗ್ ಪಂದ್ಯಗಳು ನಡೆಯಲಿವೆ.
ದೆಹಲಿ ಕ್ಯಾಪಿಟಲ್ ಟೂರ್ನಿ ಗೆಲ್ಲುವ ಕುರಿತಂತೆ ಪ್ರತಿಕ್ರಿಯಿಸಿದ ಗೌತಮ್, ಯಾವುದರ ಬಗ್ಗೆಯೂ ಖಚಿತವಾಗಿ ಹೇಳಲು ಸಾಧ್ಯವಿಲ್ಲ ಎಂದ ಅವರು, ಸಾಂಕ್ರಾಮಿಕ ರೋಗದ ಕಾರಣ ಆಟಗಾರರು ಧೀರ್ಘ ಕಾಲದಿಂದ ಆಟ ವಾಡದಿರುವ ಬಗ್ಗೆಯೂ ಒತ್ತಿ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


