ಐಪಿಎಲ್ 2020: ಕೆಕೆಆರ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ 49 ರನ್ ಗಳ ಭರ್ಜರಿ ಗೆಲುವು
ಇಲ್ಲಿನ ಶೇಖ್ ಝಾಯೆದ್ ಕ್ರೀಡಾಂಗಣದಲ್ಲಿ ಇಂದು ನಡೆದ ಐಪಿಎಲ್ 13 ಆವೃತ್ತಿಯ ಪಂದ್ಯದಲ್ಲಿ ಹಿಟ್ ಮ್ಯಾನ್ ರೋಹಿತ್ ಶರ್ಮಾ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ 49 ರನ್ ಗಳಿಂದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಸೋಲಿಸಿದೆ.

ಅಬುದಾಬಿ: ಇಲ್ಲಿನ ಶೇಖ್ ಝಾಯೆದ್ ಕ್ರೀಡಾಂಗಣದಲ್ಲಿ ಇಂದು ನಡೆದ ಐಪಿಎಲ್ 13 ಆವೃತ್ತಿಯ ಪಂದ್ಯದಲ್ಲಿ ಹಿಟ್ ಮ್ಯಾನ್ ರೋಹಿತ್ ಶರ್ಮಾ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ 49 ರನ್ ಗಳಿಂದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಸೋಲಿಸಿದೆ.
ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡ ಮುಂಬೈ ಇಂಡಿಯನ್ಸ್ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 195 ರನ್ ಗಳಿಸಿ ಎದುರಾಳಿಗೆ 196ರನ್ ಗಳ ಟಾರ್ಗೆಟ್ ನೀಡಿತು.
ನಾಯಕ ರೋಹಿತ್ ಶರ್ಮಾ 54 ಎಸೆತಗಳಲ್ಲಿ 6 ಸಿಕ್ಸರ್ ಸೇರಿದಂತೆ 80 ರನ್ ಸಿಡಿಸಿ ತಂಡದ ಮೊತ್ತ ಹೆಚ್ಚಾಗಲು ನೆರವಾದರು. ಸೂರ್ಯ ಕುಮಾರ್ ಯಾದವ್ 47 ರನ್ ಕಲೆಹಾಕಿದರು. ಕೆಕೆಆರ್ ಪರ ಬೌಲಿಂಗ್ ದಾಳಿ ನಡೆಸಿದ ವೇಗಿ ಶಿವಂ, ಮಾವಿ 32ಕ್ಕೆ 2 ವಿಕೆಟ್ ಪಡೆದು ಯಶಸ್ವಿ ಬೌಲರ್ ಎನಿಸಿಕೊಂಡರು.
ಮುಂಬೈ ಇಂಡಿಯನ್ಸ್ ನೀಡಿದ 196 ರನ್ ಗಳ ಬೃಹತ್ ಗುರಿ ಬೆನ್ನತ್ತಿದ್ದ ಕೆಕೆಆರ್ 9 ವಿಕೆಟ್ ನಷ್ಟಕ್ಕೆ 146 ರನ್ ಗಳಿಸಲಷ್ಟೇ ಶಕ್ತವಾಯಿತು. ಇದರಿಂದಾಗಿ ಮುಂಬೈ ಇಂಡಿಯನ್ಸ್ ಗೆಲುವಿನ ನಗೆ ಬೀರಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


