ಕ್ರಿಕೆಟ್

ರಾಹುಲ್ ಶತಕದ ನೆರವಿನಿಂದ 97 ರನ್ ಗಳಿಂದ ಆರ್ ಸಿಬಿ ಮಣಿಸಿದ ಕಿಂಗ್ಸ್ ಇಲೆವೆನ್ ಪಂಜಾಬ್

ಕನ್ನಡಿಗ ಕೆ.ಎಲ್ ರಾಹುಲ್ ಅವರ ಮನಮೋಹಕ ಬ್ಯಾಟಿಂಗ್ ನೆರವಿನಿಂದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ 2020ರ ಐಪಿಎಲ್ ನ ಆರನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 97 ರನ್ ಗಳ ಅಂತರದಿಂದ ಮಣಿಸಿದೆ.

ರಾಹುಲ್ ಶತಕದ ನೆರವಿನಿಂದ 97 ರನ್ ಗಳಿಂದ ಆರ್ ಸಿಬಿ ಮಣಿಸಿದ ಕಿಂಗ್ಸ್ ಇಲೆವೆನ್ ಪಂಜಾಬ್
ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ
Published On :

ದುಬೈ: ಕನ್ನಡಿಗ ಕೆ.ಎಲ್ ರಾಹುಲ್ ಅವರ ಮನಮೋಹಕ ಬ್ಯಾಟಿಂಗ್ ನೆರವಿನಿಂದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ  2020ರ ಐಪಿಎಲ್ ನ ಆರನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 97 ರನ್ ಗಳ ಅಂತರದಿಂದ ಮಣಿಸಿದೆ.

ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಪಂಜಾಬ್ ತಂಡ 20 ಓವರ್ ಗಳಲ್ಲಿ  3 ವಿಕೆಟ್ ನಷ್ಟಕ್ಕೆ 206 ರನ್ ಸೇರಿಸಿತು. ಪಂಜಾಬ್ ತಂಡದ ಆರಂಭ ಉತ್ತಮವಾಗಿತ್ತು. ಆರಂಭಿಕರಾದ ನಾಯಕ ಕೆ.ಎಲ್ ರಾಹುಲ್ ಹಾಗೂ ಮಯಾಂಕ್ ಅಗರ್ ವಾಲ್ ಜೋಡಿ ಭರ್ಜರಿ ಜೊತೆಯಾಟದ ಕಾಣಿಕೆ ನೀಡಿತು. 

ಕರ್ನಾಟಕದ ಸ್ಟಾರ್ ಆಟಗಾರ ರಾಹುಲ್  69 ಎಸೆತಗಳಲ್ಲಿ 14 ಬೌಂಡರಿ, 7 ಸಿಕ್ಸರ್ ಸಹಾಯದಿಂದ ಅಜೇಯ 132 ರನ್ ಬಾರಿಸಿದರು.  

ಕಿಂಗ್ಸ್ ಇಲೆವೆನ್ ಪಂಜಾಬ್ ನೀಡಿದ ಸ್ಪರ್ಧಾತ್ಮಕ ಮೊತ್ತವನ್ನು ಬೆನ್ನತ್ತಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 17 ಓವರ್ ಗಳಲ್ಲಿ 109 ರನ್ ಗಳಿಸುವಷ್ಟರಲ್ಲಿ ತನ್ನೆಲ್ಲಾ ವಿಕೆಟ್ ಗಳನ್ನು ಕಳೆದುಕೊಂಡು ಸೋಲಿಗೆ ಶರಣಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.