ನಿಕೋಲಾಸ್ ಪೂರಣ್ ಅದ್ಭುತ ಫೀಲ್ಡಿಂಗ್ ಗೆ ಸಚಿನ್, ಸೆಹ್ವಾಗ್ ಫಿದಾ!
ಸೆ.27 ರಂದು ನಡೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಐತಿಹಾಸಿಕ ಗೆಲುವು ದಾಖಲಿಸಿತ್ತು.

ಸೆ.27 ರಂದು ನಡೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಐತಿಹಾಸಿಕ ಗೆಲುವು ದಾಖಲಿಸಿತ್ತು.
ಈ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ನೀಡಿದ್ದ 223 ರನ್ ಗಳ ಗುರಿ ಬೆನ್ನಟ್ಟಿ 19.3 ಓವರ್ ಗಳಲ್ಲಿ 226 ರನ್ ಗಳಿಸಿದ ರಾಜಸ್ಥಾನ್ ರಾಯಲ್ಸ್ ತಂಡ ಅತಿ ಹೆಚ್ಚು ರನ್ ಚೇಸ್ ಮಾಡಿದ ತಂಡ ಎಂಬ ದಾಖಲೆ ಬರೆದಿದೆ. ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಆಟಗಾರ ಸಂಜು ಸ್ಯಾಮ್ಸನ್ ಪಂದ್ಯದ ನಿರ್ಣಾಯಕ ಘಟ್ಟದಲ್ಲಿ ಸಿಕ್ಸರ್ ಭಾರಿಸಲು ಬಲವಾಗಿ ಬ್ಯಾಟ್ ಬೀಸಿದ್ದರು.
ಶರವೇಗದಲ್ಲಿ ಚೆಂಡು ಬೌಂಡರಿಯತ್ತ ಧಾವಿಸಿತ್ತು. ಆದರೆ ನೋಡ ನೋಡುತ್ತಿದ್ದಂತೆಯೇ ಬೌಂಡರಿ ಬಳಿ ಇದ್ದ ಕಿಂಗ್ಸ್ ಇಲೆವೆನ್ ಪಂಜಾಬ್ ನ ಫೀಲ್ಡರ್ ನಿಕೋಲಾಸ್ ಪೂರಣ್ ನೇರವಾಗಿ ಬೌಂಡರಿ ತಲುಪುತ್ತಿದ್ದ ಚೆಂಡನ್ನು ಅದ್ಭುತ ಕ್ಯಾಚ್ ಮೂಲಕ ಬೌಂಡರಿ ತಾಗದಂತೆ ತಡೆದರು. ಈ ವಿಡಿಯೋ ಎಲ್ಲೆಡೆ ವೈರಲ್ ಆಗತೊಡಗಿದೆ. ನಿಕೋಲಾಸ್ ಪೂರಣ್ ಫೀಲ್ಡಿಂಗ್ ಗೆ ಕ್ರಿಕೆಟ್ ದಿಗ್ಗಜರಾದ ಸಚಿನ್ ತೆಂಡೂಲ್ಕರ್ ವಿರೇಂದ್ರ ಸೆಹ್ವಾಗ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


