ಕ್ರಿಕೆಟ್

ಐಪಿಎಲ್ 2020: ರಾಹುಲ್ ತೆವಾಟಿಯಾ ಸಿಡಿಲಬ್ಬರದ ಬ್ಯಾಟಿಂಗ್ ಗೆ ಸೆಹ್ವಾಗ್ ಪಿಧಾ!

ಒಂದೇ ಓವರ್ ನಲ್ಲಿ ಭರ್ಜರಿ ಐದು ಸಿಕ್ಸರ್ ಸಿಡಿಸಿ ಪಂದ್ಯದ ಗತಿಯನ್ನೇ ಬದಲಾಯಿಸಿದ ರಾಜಸ್ಥಾನ ರಾಯಲ್ಸ್ ತಂಡದ ಆಲ್ ರೌಂಡರ್ ರಾಹುಲ್ ತಿವಾಟಿಯಾ ಅವರನ್ನು ಮಾಜಿ ಟೀಂ ಇಂಡಿಯಾ ಬ್ಯಾಟ್ಸ್ ಮನ್ ವಿರೇಂದ್ರ ಸೆಹ್ವಾಗ್ ಕೊಂಡಾಡಿದ್ದಾರೆ.

ಐಪಿಎಲ್ 2020: ರಾಹುಲ್ ತೆವಾಟಿಯಾ ಸಿಡಿಲಬ್ಬರದ ಬ್ಯಾಟಿಂಗ್ ಗೆ ಸೆಹ್ವಾಗ್ ಪಿಧಾ!
ರಾಹುಲ್ ತೆವಾಟಿಯಾ, ಸೆಹ್ವಾಗ್
Published On :

ಶಾರ್ಜಾ: ಒಂದೇ ಓವರ್ ನಲ್ಲಿ ಭರ್ಜರಿ ಐದು ಸಿಕ್ಸರ್ ಸಿಡಿಸಿ ಪಂದ್ಯದ ಗತಿಯನ್ನೇ ಬದಲಾಯಿಸಿದ ರಾಜಸ್ಥಾನ ರಾಯಲ್ಸ್ ತಂಡದ ಆಲ್ ರೌಂಡರ್ ರಾಹುಲ್ ತೆವಾಟಿಯಾ ಅವರನ್ನು ಮಾಜಿ ಟೀಂ ಇಂಡಿಯಾ ಬ್ಯಾಟ್ಸ್ ಮನ್ ವಿರೇಂದ್ರ ಸೆಹ್ವಾಗ್ ಕೊಂಡಾಡಿದ್ದಾರೆ.

ತಿವಾಟಿಯಾ 31 ಎಸೆತಗಳಲ್ಲಿ 53 ರನ್ ಕಲೆಹಾಕುವ ಮೂಲಕ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ವಿರುದ್ಧ ಗೆಲುವು ಸಾಧಿಸಲು ನೆರವಾದರು.ರಾಜಸ್ಥಾನ್ ರಾಯಲ್ಸ್ ಗೆ 18 ಎಸೆತಗಳಲ್ಲಿ 51 ರನ್ ಗಳ ಅಗತ್ಯವಿತ್ತು.

ಶೆಲ್ಡನ್ ಕಾಟ್ರೆಲ್ಸ್ ಅವರ 18ನೇ ಓವರ್ ಪಂದ್ಯದ ಗತಿಯನ್ನೇ ಬದಲಾಯಿಸಿತು. ಈ ಓವರ್ ನಲ್ಲಿ ತೆವಾಟಿಯಾ 5 ಸಿಕ್ಸರ್ ಸಿಡಿಸುವ ಮೂಲಕ ಕ್ರಿಕೆಟ್ ಪ್ರೇಮಿಗಳಲ್ಲಿ ರಸದೌತಣ ಉಣಬಡಿಸಿದರು.

'ಏನು ಪುನರ್ ವಶೀಕರಣ, ಕ್ರಿಕೆಟ್ ಮತ್ತು ಜೀವನ ಅಂದರೆ ಈ ರೀತಿಯಲ್ಲಿ ಇರಬೇಕು, ನಿಮಿಷಗಳಲ್ಲಿ ಬದಲಾವಣೆ ಎಂದು ಸೆಹ್ವಾಗ್ ಟ್ವೀಟ್ ಮಾಡಿದ್ದಾರೆ.

ಸಂಜು ಸ್ಯಾಮ್ಸನ್ ಕೂಡಾ ಉತ್ತಮ ಪ್ರದರ್ಶನ ನೀಡಿದರು. ಏಳು ಸಿಕ್ಸರ್ ಮತ್ತು ನಾಲ್ಕು ಬೌಂಡರಿಗಳೊಂದಿಗೆ 42 ಎಸೆತಗಳಲ್ಲಿ 85 ರನ್ ಕಲೆಹಾಕಿದರು. ನಾಯಕ ಸ್ಟೀವ್ ಸ್ಮಿತ್ ಕೂಡಾ ಆಕರ್ಷಕ ಅರ್ಧ ಶತಕ ಬಾರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.