ಪದಾರ್ಪಣೆ ಪಂದ್ಯದಲ್ಲೇ ದಾಖಲೆ ಬರೆದ ಪೃಥ್ವಿ-ಮಯಾಂಕ್ ಜೋಡಿ
ಟೀಮ್ ಇಂಡಿಯಾದ ಯುವ ಆಟಗಾರರಾದ ಮುಂಬೈನ ಪೃಥ್ವಿ ಶಾ ಹಾಗೂ ಕರ್ನಾಟಕದ ಸ್ಟಾರ್ ಬ್ಯಾಟ್ಸ್ ಮನ್ ಮಯಾಂಕ್ ಅಗರ್ವಾಲ್ ಏಕದಿನ ಅಂತಾರಾಷ್ಟ್ರೀಯ ಪಂದ್ಯಕ್ಕೆ ಪದಾರ್ಪಣೆ ಮಾಡುವ ಮೂಲಕ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಹ್ಯಾಮಿಲ್ಟೋನ್: ಟೀಮ್ ಇಂಡಿಯಾದ ಯುವ ಆಟಗಾರರಾದ ಮುಂಬೈನ ಪೃಥ್ವಿ ಶಾ ಹಾಗೂ ಕರ್ನಾಟಕದ ಸ್ಟಾರ್ ಬ್ಯಾಟ್ಸ್ ಮನ್ ಮಯಾಂಕ್ ಅಗರ್ವಾಲ್ ಏಕದಿನ ಅಂತಾರಾಷ್ಟ್ರೀಯ ಪಂದ್ಯಕ್ಕೆ ಪದಾರ್ಪಣೆ ಮಾಡುವ ಮೂಲಕ ವಿಶ್ವ ದಾಖಲೆ ನಿರ್ಮಿಸಿದ್ದಾರೆ.
ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಯುವ ಆಟಗಾರರು ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದರು. ಭರವಸೆಯ ಆರಂಭಿಕರಾದ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ಅವರು ಗಾಯಕ್ಕೆ ತುತ್ತಾಗಿದ್ದರಿಂದ ಈ ಉಭಯ ಆಟಗಾರರಿಗೆ ಅವಕಾಶ ಲಭಿಸಿತ್ತು. ನ್ಯೂಜಿಲ್ಯಾಂಡ್ ವಿರುದ್ಧ ಇಂದಿನಿಂದ ಆರಂಭಗೊಂಡಿರುವ ಏಕದಿನ ಕ್ರಿಕೆಟ್ ಸರಣಿಯ ಮೊದಲ ಪಂದ್ಯದಲ್ಲಿ ಆರಂಭಿಕರಾಗಿ ಕನ್ನಡಿಗ ಮಯಾಂಕ್ ಹಾಗೂ ಮುಂಬೈಕರ್ ಪೃಥ್ವಿ ಶಾ ಡೆಬ್ಯು ಮಾಡಿದ್ದು, ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಹೊಸ ದಾಖಲೆ ನಿರ್ಮಿಸಿದ್ದಾರೆ.
ಈ ಮೂಲಕ ನಾಲ್ಕನೇ ಬಾರಿಗೆ ಭಾರತೀಯ ಆರಂಭಿಕರು ಒಂದೇ ಪಂದ್ಯದಲ್ಲಿ ಪದಾರ್ಪಣೆ ಮಾಡಿದಂತಾಗಿದೆ.
ಈ ಹಿಂದೆ 1974ರಲ್ಲಿ ಇಂಗ್ಲೆಂಡ್ ವಿರುದ್ಧ ಸುನಿಲ್ ಗವಾಸ್ಕರ್ ಮತ್ತು ಸುಧೀರ್ ನಾಯರ್ ಈ ಸಾಧನೆ ಮಾಡಿದ ಮೊದಲ ಕ್ರಿಕೆಟಿಗರಾಗಿದ್ದರು. ಆ ಬಳಿಕ 1976ರಲ್ಲಿ ನ್ಯೂಜಿಲೆಂಡ್ ವಿರುದ್ಧ ಪಾರ್ಥಸಾರಥಿ-ದಿಲಿಪ್ ವೆಂಗ್ಸರ್ಕಾರ್ ಪದಾರ್ಪಣೆ ಪಂದ್ಯದಲ್ಲೇ ಆರಂಭಿಕರಾಗಿ ಕಣಕ್ಕಿಳಿದ 2ನೇ ಜೋಡಿ ಎನಿಸಿಕೊಂಡಿದ್ದರು. 2016ರಲ್ಲಿ ಜಿಂಬಾಬ್ವೆ ವಿರುದ್ಧದ ಸರಣಿಯಲ್ಲಿ ಕನ್ನಡಿಗ ಕೆಎಲ್ ರಾಹುಲ್ - ಕರುಣ್ ನಾಯರ್ ಪದಾರ್ಪಣೆ ಪಂದ್ಯದಲ್ಲೇ ಆರಂಭಿಕರಾಗಿ ಕಣಕ್ಕಿಳಿದಿದ್ದರು.
ಇದೀಗ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಪದಾರ್ಪಣೆ ಪಂದ್ಯದಲ್ಲೇ ಪೃಥ್ವಿ ಶಾ - ಮಯಾಂಕ್ ಅಗರವಾಲ್ ಜೋಡಿ ಆರಂಭಿಕರಾಗಿ ಕಣಕ್ಕಿಳಿಯುವ ಮೂಲಕ ಈ ಸಾಧನೆಗೈದ ಭಾರತದ 4ನೇ ಜೋಡಿ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಅಷ್ಟು ಮಾತ್ರವಲ್ಲದೆ ಪದಾರ್ಪಣೆ ಪಂದ್ಯದಲ್ಲೇ ಈ ಜೋಡಿ 50 ರನ್ ಗಳ ಭರ್ಜರಿ ಜೊತೆಯಾಟ ಕೂಡ ಆಡಿ ಭರವಸೆ ಮೂಡಿಸಿದೆ.
Mayank Agarwal and Prithvi Shaw all set to make their ODI debut for #TeamIndia.
Proud moment for this duo
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


