ಭಾರತ ಆಟಗಾರರ ಮುಂದೆ ಬಾಂಗ್ಲಾ ಕ್ರಿಕೆಟಿಗರ ದುರ್ವತನೆ: ಗಂಭೀರವಾಗಿ ಪರಿಗಣಿಸಿದ ಐಸಿಸಿ ಯಾವ ಕ್ರಮ ಕೈಗೊಳ್ಳುತ್ತೇ?
ಅಂಡರ್ 19 ವಿಶ್ವಕಪ್ ಫೈನಲ್ ಗೆದ್ದ ಬೆನ್ನಲ್ಲೇ ಬಾಂಗ್ಲಾದೇಶ ಕ್ರಿಕೆಟಿಗರು ಮೈದಾನದಲ್ಲಿ ಆಕ್ರಮಣಕಾರಿಯಾಗಿ ಸಂಭ್ರಮಾಚರಣೆ ನಡೆಸಿದ್ದ ಇದನ್ನು ಐಸಿಸಿ ಗಂಭೀರವಾಗಿ ಪರಿಗಣಿಸಿದೆ.

ಪೊಚೆಫ್‌ಸ್ಟ್ರೂಮ್: ಅಂಡರ್ 19 ವಿಶ್ವಕಪ್ ಫೈನಲ್ ಗೆದ್ದ ಬೆನ್ನಲ್ಲೇ ಬಾಂಗ್ಲಾದೇಶ ಕ್ರಿಕೆಟಿಗರು ಮೈದಾನದಲ್ಲಿ ಆಕ್ರಮಣಕಾರಿಯಾಗಿ ಸಂಭ್ರಮಾಚರಣೆ ನಡೆಸಿದ್ದ ಇದನ್ನು ಐಸಿಸಿ ಗಂಭೀರವಾಗಿ ಪರಿಗಣಿಸಿದೆ.
ಫೈನಲ್ ಪಂದ್ಯ ಗೆದ್ದ ನಂತರ ಬಾಂಗ್ಲಾ ಆಟಗಾರರು ಭಾರತ ಆಟಗಾರರ ಮುಂದೆ ಉದ್ಧಟತನ ಮೆರೆದಿದ್ದರು. ಭಾರತೀಯ ಆಟಗಾರರನ್ನು ಕಿಚಾಯಿಸಿದ್ದು ಅಲ್ಲದೆ ದೈಹಿಕ ಹಲ್ಲೆಗೂ ಮುಂದಾಗಿದ್ದು ಇದನ್ನು ಐಸಿಸಿ ಗಂಭೀರವಾಗಿ ಪರಿಗಣಿಸಿದೆ ಎಂದು ಟೀಂ ಇಂಡಿಯಾ ವ್ಯವಸ್ಥಾಪಕ ಅನಿಲ್ ಪಟೇಲ್ ಹೇಳಿದ್ದಾರೆ.
ಮೊದಲಿಗೆ ಮೈದಾನದಲ್ಲಿ ಏನಾಗುತ್ತಿದೆ ಎಂಬುದು ಗೊತ್ತಾಗಲಿಲ್ಲ. ಆದರೆ ಪ್ರತಿಯೊಬ್ಬರಿಗೂ ಖಂಡಿತಾ ಗಾಬರಿಯಾಯಿತು. ಕೆಲ ಹೊತ್ತಿನ ನಂತರ ಐಸಿಸಿಯ ಅಧಿಕಾರಿಗಳು ಪಂದ್ಯದ ಕೊನೆಯ ಕೆಲ ಹೊತ್ತಿನ ವಿಡಿಯೋಗಳನ್ನು ಪರಿಶೀಲಿಸಿದ ಬಳಿಕ ನಮಗೂ ವಾಸ್ತವವನ್ನು ತಿಳಿಸಿದರು ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


