ಐಸಿಸಿ ಮಹಿಳಾ ಟಿ20 ವಿಶ್ವಕಪ್ ಫೈನಲ್: ಭಾರತ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ಗೆ ಜನುಮದಿನ ಸಂಭ್ರಮ!
ಇದೇ ಮೊದಲ ಬಾರಿಗೆ ಮಹಿಳಾ ವಿಶ್ವಕಪ್ನಲ್ಲಿ ಫೈನಲ್ ಪ್ರವೇಶಿಸಿರುವ ಭಾರತ ಚೊಚ್ಚಲ ಕಿರೀಟವನ್ನು ಎದುರು ನೋಡುತ್ತಿದ್ದು, ಇದರ ನಡುವೆಯೇ ಭಾರತ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ಅವರಿಗೆ ಇಂದು ಜನ್ಮದಿನದ ಸಂಭ್ರಮ ಕೂಡ ಹೌದು..

ನವದೆಹಲಿ: ಇದೇ ಮೊದಲ ಬಾರಿಗೆ ಮಹಿಳಾ ವಿಶ್ವಕಪ್ನಲ್ಲಿ ಫೈನಲ್ ಪ್ರವೇಶಿಸಿರುವ ಭಾರತ ಚೊಚ್ಚಲ ಕಿರೀಟವನ್ನು ಎದುರು ನೋಡುತ್ತಿದ್ದು, ಇದರ ನಡುವೆಯೇ ಭಾರತ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ಅವರಿಗೆ ಇಂದು ಜನ್ಮದಿನದ ಸಂಭ್ರಮ ಕೂಡ ಹೌದು..
ಹೌದು.. ಇಂದು ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ಅವರಿಗೆ ಜನ್ಮದಿನದ ಸಂಭ್ರಮವಾಗಿದ್ದು, ಮಾರ್ಚ್ 8 ಅವರ ಜನ್ಮದಿನವಾಗಿದೆ. ಹೀಗಾಗಿ ಅವರು ಇಂದು 31ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ವಿಶೇಷವೆಂದರೆ ಇಂದೇ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕೂಡ ಇದ್ದು, ಇದೇ ದಿನ ಭಾರತ ತನ್ನ ಚೊಚ್ಚಲ ಅಂತಾರಾಷ್ಟ್ರೀಯ ಮಹಿಳಾ ಟಿ20 ವಿಶ್ವಕಪ್ ಫೈನಲ್ ಪಂದ್ಯವನ್ನು ಆಡುತ್ತಿದೆ. ಹೀಗಾಗಿ ಇಂದಿನ ಪಂದ್ಯವನ್ನು ಭಾರತ ತಂಡ ಗೆದ್ದು ನಾಯಕಿ ಹರ್ಮನ್ ಪ್ರೀತ್ ಕೌರ್ ಮತ್ತು ಭಾರತದ ಎಲ್ಲ ಮಹಿಳೆಯರಿಗೆ ಭರ್ಜರಿ ಉಡುಗೊರೆ ನೀಡಲು ಸಜ್ಜಾಗಿ ನಿಂತಿದೆ.
ಇತ್ತ ಬರ್ತ್ ಡೇ ಗರ್ಲ್ ಹರ್ಮನ್ ಪ್ರೀತ್ ಕೌರ್ ಗೆ ಬಿಸಿಸಿಐ ವಿಶೇಷವಾಗಿ ಶುಭಕೋರಿದ್ದು, ಇಂದಿನ ಫೈನಲ್ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿ ಭಾರತಕ್ಕೆ ಚೊಚ್ಚಲ ವಿಶ್ವಕಪ್ ತಂದು ಕೊಡುವ ವಿಶ್ವಾಸ ವ್ಯಕ್ತಪಡಿಸಿದೆ. ಒಂದು ವೇಳೆ ಈ ಪಂದ್ಯದಲ್ಲಿ ಭಾರತ ಗೆದ್ದರೆ ಭಾರತಕ್ಕೆ ಮೊಟ್ಟ ಮೊದಲ ಮಹಿಳಾ ಟಿ20 ವಿಶ್ವಕಪ್ ತಂದುಕೊಟ್ಟ ಭಾರತದ ಮೊದಲ ನಾಯಕಿ ಎಂಬ ಕೀರ್ತಿಗೂ ಹರ್ಮನ್ ಪ್ರೀತ್ ಕೌರ್ ಭಾಜನರಾಗಲಿದ್ದಾರೆ.
ಇನ್ನು ಹರ್ಮನ್ ಪ್ರೀತ್ ಕೌರ್ ಅವರು ಈ ವರೆಗೂ 104 ಟಿ20 ಪಂದ್ಯಗಳನ್ನಾಡಿದ್ದು, 27.9 ಸರಾಸರಿಯಲ್ಲಿ 2038 ರನ್ ಗಳಿಸಿದ್ದಾರೆ. ಈ ಪೈಕಿ 1 ಶತಕ ಹಾಗೂ 6 ಅರ್ಧಶತಕಗಳು ಸೇರಿವೆ. ಅಲ್ಲದೆ ಭಾರತದ ಪರ 100 ಟಿ20 ಪಂದ್ಯವನ್ನಾಡಿದ ಮೊದಲ ಆಟಗಾರ್ತಿ ಎಂಬ ಕೀರ್ತಿಗೂ ಹರ್ಮನ್ ಪ್ರೀತ್ ಕೌರ್ ಭಾಜನರಾಗಿದ್ದಾರೆ.
Happy Birthday @ImHarmanpreet
The nation wishes you the best - go well in the final
Related Article
ಮಹಿಳಾ ಟಿ20 ವಿಶ್ವಕಪ್ ಫೈನಲ್: ಭಾರತ-ಆಸಿಸ್ ಕದನ, 75000 ಟಿಕೆಟ್ಗಳು ಸೋಲ್ಡ್ ಔಟ್
ಮಹಿಳಾ ಟಿ20 ವಿಶ್ವಕಪ್ ಫೈನಲ್: ಪ್ರಶಸ್ತಿಗಾಗಿ ಭಾರತ-ಆಸ್ಟ್ರೇಲಿಯಾ ಕಾದಾಟ
ಕ್ರಿಕೆಟಿಗೂ ತಟ್ಟಿದ ಕೊರೋನಾ ಭೀತಿ! ಐಪಿಎಲ್ ಮುಂದೂಡಿಕೆ ಸೂಚನೆ ಕೊಟ್ಟ ಮಹಾರಾಷ್ಟ್ರ ಆರೋಗ್ಯ ಸಚಿವ
ಇತಿಹಾಸದ ಕನಸಿನಲ್ಲಿ ಹರ್ಮನ್ ಪ್ರೀತ್, ವಿಶಿಷ್ಠ ದಾಖಲೆಯ ಸನಿಹದಲ್ಲಿ ಟೀಂ ಇಂಡಿಯಾ ನಾಯಕಿ!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


