ಐಪಿಎಲ್ 2021: ಏಳು ವಿಕೆಟ್ ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ಮಣಿಸಿದ ಡೆಲ್ಲಿ ಕ್ಯಾಪಿಟಲ್ಸ್
ವಾಖೆಂಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಎರಡನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಡೆಲ್ಲಿ ಕ್ಯಾಪಿಟಲ್ಸ್ ಏಳು ವಿಕೆಟ್ ಗಳಿಂದ ಸೋಲಿಸಿದೆ.

ಮುಂಬೈ: ವಾಖೆಂಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಎರಡನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಡೆಲ್ಲಿ ಕ್ಯಾಪಿಟಲ್ಸ್ ಏಳು ವಿಕೆಟ್ ಗಳಿಂದ ಸೋಲಿಸಿದೆ.
ಚೆನ್ನೈ ಸೂಪರ್ ಕಿಂಗ್ಸ್ ನೀಡಿದ್ದ 189 ರನ್ ಗಳ ಗುರಿಯನ್ನು ಬೆನ್ನಟ್ಟಿದ್ದ ಡೆಲ್ಲಿ ಕ್ಯಾಪಿಟಲ್ಸ್ ಇನ್ನೂ 8 ಎಸೆತಗಳು ಬಾಕಿ ಇರುವಂತೆಯೇ 18.4 ಓವರ್ ಗಳಲ್ಲಿ 190 ರನ್ ಗಳಿಸುವ ಮೂಲಕ ವಿಜಯದ ನಗೆ ಬೀರಿತು.
ಆರಂಭಿಕ ಆಟಗಾರರಾದ ಪೃಥ್ವಿ ಶಾ ಮತ್ತು ಶಿಖರ್ ಧವನ್, ಉತ್ತಮ ಪ್ರದರ್ಶದ ಮೂಲಕ ಪಂದ್ಯ ಗೆಲುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಪೃಥ್ವಿ ಶಾ 38 ಎಸೆತಗಳಲ್ಲಿ 9 ಬೌಂಡರಿ, ಮೂರು ಸಿಕ್ಸರ್ ಗಳೊಂದಿಗೆ 72 ರನ್ ಬಾರಿಸಿದರೆ, ಶಿಖರ್ ಧವನ್, 54 ಎಸೆತಗಳಲ್ಲಿ ನಾಲ್ಕು ಬೌಂಡರಿ ಹಾಗೂ ಎರಡು ಎಸೆತಗಳೊಂದಿಗೆ 85 ರನ್ ಕಲೆ ಹಾಕಿದರು. ಈ ಜೊತೆಯಾಟ ಮುರಿಯುವಲ್ಲಿ ಡ್ವೇನ್ ಬ್ರಾವೋ ಯಶಸ್ವಿಯಾದರು.
ನಂತರ ಬಂದ ಮಾರ್ಕಸ್ ಸ್ಟೊಯಿನಿಸ್ 14 ರನ್ ಗಳಿಸಿ ವಿಕೆಟ್ ಒಪ್ಪಿಸಿದರೆ, ನಾಯಕ ರಿಷಭ್ ಪಂತ್, ಎರಡು ಬೌಂಡರಿಗೆಲ ನೆರವಿನಿಂದ 15 ರನ್ ಗಳಿಸಿ ಔಟಾಗದೆ ಉಳಿದರು. ಚೆನ್ನೈ ಪರ ಶಾರ್ದೂಲ್ ಎರಡು ವಿಕೆಟ್ ಪಡೆದರು.
ಇದಕ್ಕೂ ಮುನ್ನ ಬ್ಯಾಟಿಂಗ್ ನಡೆಸಿದ ಚೆನ್ನೈ ಸೂಪರ್ ಕಿಂಗ್ಸ್ ಸುರೇಶ್ ರೈನ್ ಅವರ ಆಕರ್ಷಕ 54 ಮತ್ತು ಸ್ಯಾಮ್ ಕರನ್ ಅವರ ಬಿರುಸಿನ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 188 ರನ್ ಗಳಿಸಿತು. ನಾಯಕ ಧೋನಿ
ಡಕ್ ಔಟ್ ಆದರೆ, ಮೊಯಿಲ್ ಅಲಿ 36, ರವೀಂದ್ರ ಜಡೇಜಾ 26, ಅಂಬಟಿ ರಾಯುಡು 23 ರನ್ ಗಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


