ಮೊದಲ ಪಂದ್ಯದಲ್ಲೇ ಭಾರೀ ದಂಡಕ್ಕೆ ಗುರಿಯಾದ ಧೋನಿ!
ಐಪಿಎಲ್‌ನ ಎರಡನೇ ಪಂದ್ಯದಲ್ಲಿ ಮಹೇಂದ್ರ ಸಿಂಗ್ ಧೋನಿ ಮುಂದಾಳತ್ವದ ಚೆನ್ನೈ ಸೂಪರ್ ಕಿಂಗ್ಸ್, ದೆಹಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್ ಮಾಡಿದ ಹಿನ್ನೆಲೆಯಲ್ಲಿ ದಂಡ ವಿಧಿಸಲಾಗಿದೆ.

ಮುಂಬೈ: ಐಪಿಎಲ್‌ನ ಎರಡನೇ ಪಂದ್ಯದಲ್ಲಿ ಮಹೇಂದ್ರ ಸಿಂಗ್ ಧೋನಿ ಮುಂದಾಳತ್ವದ ಚೆನ್ನೈ ಸೂಪರ್ ಕಿಂಗ್ಸ್, ದೆಹಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್ ಮಾಡಿದ ಹಿನ್ನೆಲೆಯಲ್ಲಿ ದಂಡ ವಿಧಿಸಲಾಗಿದೆ.
ಏಪ್ರಿಲ್ 10 ರಂದು ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ, ದೆಹಲಿ ಕ್ಯಾಪಿಟಲ್ಸ್ ವಿರುದ್ಧ ಏಳು ವಿಕೆಟ್ ಸೋಲು ಕಂಡಿತ್ತು. ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಚೆನ್ನೈ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 188 ರನ್ ಕಲೆ ಹಾಕಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ದೆಹಲಿ 18.4 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 190 ರನ್ ಸೇರಿಸಿತು.
ಧೋನಿಯ ಚೆನ್ನೈ ತಂಡ ನಿಧಾನ ಓವರ್ ಬೌಲಿಂಗ್ ನಡೆಸಿದ್ದು, ಶಿಕ್ಷೆಗೆ ಗುರಿಯಾಗಿದೆ. ತಂಡದ ನೀತಿ ಸಂಹಿತೆ ಉಲ್ಲಂಘನೆಯ ಮೊದಲ ಪ್ರಕರಣ ಇದಾಗಿದ್ದು, ಧೋನಿಗೆ 12 ಲಕ್ಷ ರೂಪಾಯಿಗಳ ದಂಡ ವಿಧಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


