ಕ್ರಿಕೆಟ್

ರೋಚಕ ಹಣಾಹಣಿಯಲ್ಲಿ ರಾಜಸ್ಥಾನ ವಿರುದ್ಧ ನಾಲ್ಕು ರನ್ ಗಳಿಂದ ಗೆಲುವು ಸಾಧಿಸಿದ ಪಂಜಾಬ್ ಕಿಂಗ್ಸ್ 

ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 14 ಆವೃತ್ತಿಯ ರಾಜಸ್ಥಾನ ರಾಯಲ್ಸ್ ವಿರುದ್ಧ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ 4 ರನ್ ಗಳ ಅಂತರದಿಂದ ಗೆಲುವು ಸಾಧಿಸಿದೆ.

ರೋಚಕ ಹಣಾಹಣಿಯಲ್ಲಿ ರಾಜಸ್ಥಾನ ವಿರುದ್ಧ ನಾಲ್ಕು ರನ್ ಗಳಿಂದ ಗೆಲುವು ಸಾಧಿಸಿದ ಪಂಜಾಬ್ ಕಿಂಗ್ಸ್ 
ಪಂಜಾಬ್ ಕಿಂಗ್ಸ್ ಆಟಗಾರರು
Published On :

ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 14 ಆವೃತ್ತಿಯ ರಾಜಸ್ಥಾನ ರಾಯಲ್ಸ್ ವಿರುದ್ಧ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ 4 ರನ್ ಗಳ ಅಂತರದಿಂದ ಗೆಲುವು ಸಾಧಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ನಿಗಧಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 221 ರನ್ ಗಳಿಸಿತು.  ಪಂಜಾಬ್ ಕಿಂಗ್ಸ್ ಪರ  ಕೆ.ಎಲ್. ರಾಹುಲ್ ಆಕರ್ಷಕ 91, ದೀಪಕ್ ಹೂಡಾ 64, ಕ್ರಿಸ್ ಗೇಲ್ 40 ರನ್ ಗಳಿಸಿದರು. ರಾಜಸ್ಥಾನ ರಾಯಲ್ಸ್ ಪರ ಚೇತನ್ ಸಕಾರಿಯಾ 3, ಕ್ರಿಸ್ ಮೋರಿಸ್ 2, ರಿಯಾನ್ ಪರಾಗ್ 1 ವಿಕೆಟ್ ಪಡೆದುಕೊಂಡರು.

ಪಂಜಾಬ್ ಕಿಂಗ್ಸ್ ನೀಡಿದ್ದ ಬೃಹತ್ ಮೊತ್ತವನ್ನು ಬೆನ್ನಟ್ಟಿದ್ದ ರಾಜಸ್ಥಾನ ರಾಯಲ್ಸ್ ಪರ  ಸಂಜು ಸ್ಯಾಮ್ಸನ್ 119, ರಿಯಾನ್ ಪರಾಗ್ 25, ಜೋಸ್  ಬಟ್ಲರ್ 25 ರನ್ ಗಳಿಸಿದರು. ಆದರೆ,ಅಂತಿಮ ಎಸೆತದಲ್ಲಿ ರಾಜಸ್ಥಾನ ಗೆಲುವಿಗೆ ಐದು ರನ್ ಗಳ ಅಗತ್ಯವಿತ್ತು. ಆದರೆ, ಸಂಜು ಔಟ್ ಆಗುವುದರೊಂದಿಗೆ ರಾಜಸ್ಥಾನ ಗೆಲುವಿನ ಕನಸು ಕಮರಿ ಹೋಯಿತು.

ನಿಗದಿತ 20 ಓವರ್ ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 217 ರನ್ ಗಳಿಸಲಷ್ಟೇ ರಾಜಸ್ಥಾನ ರಾಯಲ್ಸ್  ಶಕ್ತವಾಯಿತು. ಪರಿಣಾಮ ಪಂಜಾಬ್ ಕಿಂಗ್ಸ್  ನಾಲ್ಕು ರನ್ ಗಳ ಅಂತರದಿಂದ ಗೆಲುವು ಸಾಧಿಸಿ, ವಿಜಯದ ನಗೆ ಬೀರಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.