ಐಪಿಎಲ್ 2021: ಕೋಪದಲ್ಲಿ ಕುರ್ಚಿ ಹೊಡೆದುರುಳಿಸಿದ ವಿರಾಟ್ ಕೊಹ್ಲಿ
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಔಟ್ ಆದ ಬಳಿಕ ಕೋಪದಲ್ಲಿ ಕುರ್ಚಿ ಹೊಡೆದುರುಳಿಸಿದ್ದಾರೆ.

ಚೆನ್ನೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಔಟ್ ಆದ ಬಳಿಕ ಕೋಪದಲ್ಲಿ ಕುರ್ಚಿ ಹೊಡೆದುರುಳಿಸಿದ್ದಾರೆ.
ಸನ್ ರೈಸರ್ಸ್ ಹೈದ್ರಾಬಾದ್ ವಿರುದ್ಧ ಬುಧವಾರ ನಡೆದ ಪಂದ್ಯದ ವೇಳೆ ಜೇಸನ್ ಹೋಲ್ಡರ್ ಎಸೆತದಲ್ಲಿ ವಿಜಯ್ ಶಂಕರ್ ಗೆ ಕ್ಯಾಚ್ ನೀಡಿ ಫೆವಿಲಿಯನ್ ನತ್ತ ಹೆಜ್ಜೆ ಹಾಕುತ್ತಿದ್ದ ಕೊಹ್ಲಿ, ಸಂಯಮವನ್ನು ಕಳೆದುಕೊಂಡು, ಬೌಂಡರಿ ಹಗ್ಗವನ್ನು ಇನ್ನು ಮುಂದಕ್ಕೆ ಸಾಗಿ ಡಗೌಟ್ ನಲ್ಲಿದ್ದ ಕುರ್ಚಿಯಿಂದ ಬ್ಯಾಟಿನಿಂದ ಹೊಡೆದುರುಳಿಸಿದ್ದಾರೆ.
ಮೈದಾನದ ಒಳಗಡೆ ಆಕ್ರಮಣಕಾರಿ ಮನೋಭಾವ ಮೈಗೂಡಿಸಿಕೊಂಡಿರುವ ವಿರಾಟ್ ಕೊಹ್ಲಿ, ಹಲವು ವೇಳೆ ತಾಳ್ಮೆ ಕಳೆದುಕೊಂಡ ಪ್ರಸಂಗಗಳಿವೆ. ಇದೀಗ ಮತ್ತೊಮ್ಮೆ ಕೊಹ್ಲಿ ಎಲ್ಲೆ ಮೀರಿರುವುದು ಕಂಡುಬಂದಿದ್ದು, ವ್ಯಾಪಕ ಟೀಕೆಗಳಿಗೆ ಗುರಿಯಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


