ಐಪಿಎಲ್ 2021: ಚೆನ್ನೈ ಗೆಲುವಿನ 'ದೀಪ' ಬೆಳಗಿಸಿದ ಚಹಾರ್
ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟಿ-20 ಕ್ರಿಕೆಟ್ ಟೂರ್ನಿಯ 8ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಆರು ವಿಕೆಟ್ ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ಗೆಲುವು ದಾಖಲಿಸಿದೆ. ಇದರೊಂದಿಗೆ ಐಪಿಎಲ್ 14ನೇ ಆವೃತ್ತಿಯಲ್ಲಿ ಮೊದಲ ಗೆಲುವನ್ನು ದಾಖಲಿಸಿದೆ.

ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟಿ-20 ಕ್ರಿಕೆಟ್ ಟೂರ್ನಿಯ 8ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಆರು ವಿಕೆಟ್ ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ಗೆಲುವು ದಾಖಲಿಸಿದೆ. ಇದರೊಂದಿಗೆ ಐಪಿಎಲ್ 14ನೇ ಆವೃತ್ತಿಯಲ್ಲಿ ಮೊದಲ ಗೆಲುವನ್ನು ದಾಖಲಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್, ಶಾರುಖ್ ಖಾನ್ 47, ಜೇ ರಿಚರ್ಡನ್ಸ್ 22, ಕ್ರೀಸ್ ಗೇಲ್ ಕೇವಲ 10 ರನ್ ಗಳಿಸಿ ಔಟಾಗುವ ಮೂಲಕ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 106 ರನ್ ಗಳಿಸಲಷ್ಟೇ ಶಕ್ತವಾಯಿತು. ಚೆನ್ನೈ ಸೂಪರ್ ಕಿಂಗ್ಸ್ ಪರ ಉತ್ತಮ ಬೌಲಿಂಗ್ ಪ್ರದರ್ಶಿಸಿದ ದೀಪಕ್ ಚಹಾರ್ 4, ಡ್ವೇನ್ ಬ್ರಾವೊ 1, ಸ್ಯಾಮ್ ಕರನ್ 1 ವಿಕೆಟ್ ಪಡೆದುಕೊಂಡರು.
ಪಂಜಾಬ್ ಕಿಂಗ್ಸ್ ನೀಡಿದ 106 ರನ್ ಗಳ ಗುರಿ ಬೆನ್ನಟ್ಟಿದ್ದ ಚೆನ್ನೈ ಸೂಪರ್ ಕಿಂಗ್ಸ್ ಪರ ಮೊಯಿಲ್ ಅಲಿ 46, ಫಾಫ್ ಡು ಪ್ಲೆಸ್ಸಿ 36, ಸುರೇಶ್ ರೈನಾ 8 ರನ್ ಗಳಿಸಿದರು. ಪಂಜಾಬ್ ಕಿಂಗ್ಸ್ ಪರ ಮೊಹಮ್ಮದ್ ಶಮಿ 2, ಅರ್ಷ್ ದೀಪ್ ಸಿಂಗ್ 1, ಮುರುಗನ್ ಅಶ್ವಿನ್ 1 ವಿಕೆಟ್ ಪಡೆದರು. ಚೆನ್ನೈ ಸೂಪರ್ ಕಿಂಗ್ಸ್ ಪರ 4 ವಿಕೆಟ್ ಕಬಳಿಸಿದ ದೀಪಕ್ ಚಹಾರ್ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


