ಐಪಿಎಲ್ 2021: ನನಗೆ ತುಂಬಾ ವಯಸ್ಸಾಗಿದೆ; 200ನೇ ಪಂದ್ಯ ಗೆದ್ದ ಬಳಿಕ ಧೋನಿ ಮಾತು!
ಚೆನ್ನೈ ಸೂಪರ್ ಕಿಂಗ್ಸ್(ಸಿಎಸ್ಕೆ) ಪರ 200ನೇ ಪಂದ್ಯವಾಡಿದ ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ನನಗೆ ತುಂಬಾ ವಯಸ್ಸಾಗಿದೆ ಎಂದು ಹೇಳಿದರು.

ಮುಂಬೈ: ಚೆನ್ನೈ ಸೂಪರ್ ಕಿಂಗ್ಸ್(ಸಿಎಸ್ಕೆ) ಪರ 200ನೇ ಪಂದ್ಯವಾಡಿದ ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ನನಗೆ ತುಂಬಾ ವಯಸ್ಸಾಗಿದೆ ಎಂದು ಹೇಳಿದರು.
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ನ ಎಂಟನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಮೈದಾನಕ್ಕೀಳಿದ ಧೋನಿ ಸಿಎಸ್ಕೆ ಪರ 200ನೇ ಪಂದ್ಯವನ್ನು ಆಡುವ ಮೂಲಕ ತನ್ನ ಕ್ರಿಕೆಟ್ ವೃತ್ತಿ ಬದುಕಿಗೆ ಮತ್ತೊಂದು ಗರಿ ಸೇರಿಸಿದರು.
2008ರಿಂದ ಪ್ರಾರಂಭವಾಗಿದ್ದು ಬಹಳ ದೀರ್ಘ ಪ್ರಯಾಣವಾಗಿದೆ. ನನಗೆ ತುಂಬಾ ವಯಸ್ಸಾಗಿದೆ ಅಂತಾ ಅನಿಸುತ್ತಿದೆ. ಪಂಜಾಬ್ ವಿರುದ್ಧ ಬೌಲರ್ ಅದ್ಭುತ ಬೌಲಿಂಗ್ ಮಾಡಿದ್ದು ಗೆಲುವಿಗೆ ಕಾರಣವಾಯಿತು ಎಂದು ಧೋನಿ ಪಂದ್ಯದ ನಂತರ ಆತಿಥೇಯ ಬ್ರಾಡ್‌ಕಾಸ್ಟರ್ ಸ್ಟಾರ್ ಸ್ಪೋರ್ಟ್ಸ್‌ಗೆ ತಿಳಿಸಿದರು.
ಸಿಎಸ್ಕೆ ಬಲಗೈ ವೇಗಿ ದೀಪಕ್ ಚಹರ್ ನಾಲ್ಕು ವಿಕೆಟ್ ಕಬಳಿಸಿದ್ದು ಐಪಿಎಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸುಲಭ ಗೆಲುವು ದಾಖಲಿಸಲು ಸಾಧ್ಯವಾಯಿತು.
ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟಿ-20 ಕ್ರಿಕೆಟ್ ಟೂರ್ನಿಯ 8ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಆರು ವಿಕೆಟ್ ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ಗೆಲುವು ದಾಖಲಿಸಿದೆ. ಇದರೊಂದಿಗೆ ಐಪಿಎಲ್ 14ನೇ ಆವೃತ್ತಿಯಲ್ಲಿ ಮೊದಲ ಗೆಲುವನ್ನು ದಾಖಲಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


