ಐಪಿಎಲ್ 2021: ಸತತ ಎರಡನೇ ಗೆಲುವು ದಾಖಲಿಸಿದ ಮುಂಬೈ ಇಂಡಿಯನ್ಸ್
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 14ನೇ ಆವೃತ್ತಿಯ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 13 ರನ್ ಗಳಿಂದ ಗೆಲುವು ದಾಖಲಿಸಿದೆ.

ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 14ನೇ ಆವೃತ್ತಿಯ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 13 ರನ್ ಗಳಿಂದ ಗೆಲುವು ದಾಖಲಿಸಿದೆ.
ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಮುಂಬೈ ಇಂಡಿಯನ್ಸ್ ತಂಡ ನಿಗದಿತ ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 150 ರನ್ ಪೇರಿಸಿತ್ತು. ಮುಂಬೈ ನೀಡಿದ ಸಾಧಾರಣ ಮೊತ್ತದ ಗುರಿ ಬೆನ್ನಟ್ಟಿದ ಹೈದರಾಬಾದ್ ತಂಡ 13 ರನ್ ಗಳಿಂದ ಮುಂಬೈ ಶರಣಾಗಿದೆ.
ಮುಂಬೈ ಇಂಡಿಯನ್ಸ್ ಪರ ಕ್ವಿಂಟನ್ ಡಿಕಾಕ್ 40, ರೋಹಿತ್ ಶರ್ಮಾ 32 ಕೀರನ್ ಪೊಲಾರ್ಡ್ ಅಜೇಯ 35 ರನ್ ಬಾರಿಸಿದ್ದರು.
ಸನ್ ರೈಸರ್ಸ್ ಹೈದರಾಬಾದ್ ಪರ ಡೇವಿಡ್ ವಾರ್ನರ್ 36, ಜಾನಿ ಬೈರ್ಸ್ಟೋವ್ 43, ವಿಜಯ್ ಶಂಕರ್ 28 ರನ್ ಬಾರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


