ಟಿ-20 ವಿಶ್ವಕಪ್ ಟೂರ್ನಿ: ಪಾಕ್ ಕ್ರಿಕೆಟ್ ಆಟಗಾರರಿಗೆ ವೀಸಾ ಸಿಗಲಿದೆ- ಬಿಸಿಸಿಐ ಅಪೆಕ್ಸ್ ಕೌನ್ಸಿಲ್
ಅಕ್ಟೋಬರ್ ತಿಂಗಳಿನಲ್ಲಿ ಭಾರತದಲ್ಲಿ ನಡೆಯಲಿರುವ ಟಿ–20 ವಿಶ್ವಕಪ್ ಟೂರ್ನಿಯಲ್ಲಿ ಭಾಗವಹಿಸಲು ಪಾಕಿಸ್ತಾನದ ಕ್ರಿಕೆಟ್ ಆಟಗಾರರಿಗೆ ವೀಸಾ ನೀಡುವುದಾಗಿ ಸರ್ಕಾರ ಭರವಸೆ ನೀಡಿದೆ ಎಂದು ಬಿಸಿಸಿಐನ ಕಾರ್ಯದರ್ಶಿ ಜಯ್ ಶಾ ಅವರು ಬಿಸಿಸಿಐನ ಅಪೆಕ್ಸ್ ಕೌನ್ಸಿಲ್‌ಗೆ ತಿಳಿಸಿದ್ದಾರೆ.

ನವದೆಹಲಿ: ಅಕ್ಟೋಬರ್ ತಿಂಗಳಿನಲ್ಲಿ ಭಾರತದಲ್ಲಿ ನಡೆಯಲಿರುವ ಟಿ–20 ವಿಶ್ವಕಪ್ ಟೂರ್ನಿಯಲ್ಲಿ ಭಾಗವಹಿಸಲು ಪಾಕಿಸ್ತಾನದ ಕ್ರಿಕೆಟ್ ಆಟಗಾರರಿಗೆ ವೀಸಾ ನೀಡುವುದಾಗಿ ಸರ್ಕಾರ ಭರವಸೆ ನೀಡಿದೆ ಎಂದು ಬಿಸಿಸಿಐನ ಕಾರ್ಯದರ್ಶಿ ಜಯ್ ಶಾ ಅವರು ಬಿಸಿಸಿಐನ ಅಪೆಕ್ಸ್ ಕೌನ್ಸಿಲ್‌ಗೆ ತಿಳಿಸಿದ್ದಾರೆ.
ಶುಕ್ರವಾರ ನಡೆದ ವಿಡಿಯೊ ಕಾನ್ಫರೆನ್ಸ್ ಸಭೆಯಲ್ಲಿ ಮಾತನಾಡಿರುವ ಶಾ ಅವರು ಕೌನ್ಸಿಲ್‌ಗೆ ಈ ವಿಷಯ ತಿಳಿಸಿದ್ದಾರೆಂದು ತಿಳಿದುಬಂದಿದೆ.
ಇದೇ ವೇಳೆ, ಟಿ–20 ವಿಶ್ವಕಪ್ ಟೂರ್ನಿಯನ್ನು ದೇಶದ 9 ಸ್ಥಳಗಳಲ್ಲಿ ಆಯೋಜಿಸಲು ನಿರ್ಧರಿಸಲಾಗಿದ್ದು, ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಅಂತಿಮ ಪಂದ್ಯವನ್ನು ಆಯೋಜಿಸಲು ನಿರ್ಧರಿಸಲಾಗಿದೆ.
ದೆಹಲಿ, ಮುಂಬೈ, ಚೆನ್ನೈ, ಕೋಲ್ಕತ್ತ, ಬೆಂಗಳೂರು, ಹೈದರಾಬಾದ್, ಧರ್ಮಶಾಲಾ ಮತ್ತು ಲಖನೌದಲ್ಲಿ ಪಂದ್ಯಗಳು ನಡೆಯಲಿವೆ ಎಂದು ವರದಿಗಳು ತಿಳಿಸಿವೆ.
‘ಪಾಕಿಸ್ತಾನ ಕ್ರಿಕೆಟ್ ತಂಡದ ವೀಸಾ ಸಮಸ್ಯೆ ಬಗೆಹರಿದಿದೆ. ಆದರೂ, ಪಂದ್ಯಗಳನ್ನು ವೀಕ್ಷಿಸಲು ಅಭಿಮಾನಿಗಳು ಗಡಿ ದಾಟಿ ಬರಬಹುದೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ’ ಎಂದು ಅಪೆಕ್ಸ್ ಕೌನ್ಸಿಲ್ ಸದಸ್ಯರೊಬ್ಬರು ಪಿಟಿಐಗೆ ತಿಳಿಸಿದ್ದಾರೆ.
‘ಈ ಬಗ್ಗೆ ಸರಿಯಾದ ಸಮಯದಲ್ಲಿ ನಿರ್ಧರಿಸಲಾಗುವುದು ಎಂದು ನಾವು ಐಸಿಸಿಗೆ ಭರವಸೆ ನೀಡಿದ್ದೇವೆ’ ಎಂದು ಸಭೆಯಲ್ಲಿ ಕಾರ್ಯದರ್ಶಿ ಶಾ ಘೋಷಿಸಿದರು.
ಉಭಯ ದೇಶಗಳ ರಾಜತಾಂತ್ರಿಕ ಉದ್ವಿಗ್ನತೆಯಿಂದಾಗಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಒಂದು ದಶಕದಿಂದ ಕ್ರಿಕೆಟ್ ಸರಣಿ ಆಡಿಲ್ಲ.
ಈ ವರ್ಷ ನಡೆಯಲಿರುವ ಟಿ–20 ವಿಶ್ವಕಪ್ 7ನೇ ಆವೃತ್ತಿಯಲ್ಲಿ ಭಾಗವಹಿಸಲು ತನ್ನ ಆಟಗಾರರಿಗೆ ವೀಸಾ ನೀಡಿಕೆ ಬಗ್ಗೆ ಸ್ಪಷ್ಟನೆ ನೀಡುವಂತೆ ಪಾಕಿಸ್ತಾನವು ಐಸಿಸಿಯನ್ನು ಒತ್ತಾಯಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


