ತಾನು ಎಡವಿದರೂ, ಮ್ಯಾಕ್ಸ್‌ವೆಲ್, ಎಬಿಡಿ ಸಿಡಿಲಬ್ಬರದ ಬ್ಯಾಟಿಂಗ್ ಕೊಹ್ಲಿ ಪ್ರೋತ್ಸಾಹ, ವಿಡಿಯೋ ವೈರಲ್!
ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದ ವಿರಾಟ್ ಕೊಹ್ಲಿ 5 ರನ್ ಗಳಿಗೆ ಔಟ್ ಆಗಿ ನಿರಾಶೆ ಮೂಡಿಸಿದ್ದರು. ಆರಂಭಿಕ ಆಘಾತಕ್ಕೆ ಸಿಲುಕಿದ್ದ ಆರ್ ಸಿಬಿ ತಂಡಕ್ಕೆ ಆಸರೆಯಾಗಿದ್ದು ಮ್ಯಾಕ್ಸ್‌ವೆಲ್ ಮತ್ತು ಎಬಿ ಡಿವಿಲಿಯರ್ಸ್.

ಚೆನ್ನೈ: ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದ ವಿರಾಟ್ ಕೊಹ್ಲಿ 5 ರನ್ ಗಳಿಗೆ ಔಟ್ ಆಗಿ ನಿರಾಶೆ ಮೂಡಿಸಿದ್ದರು. ಆರಂಭಿಕ ಆಘಾತಕ್ಕೆ ಸಿಲುಕಿದ್ದ ಆರ್ ಸಿಬಿ ತಂಡಕ್ಕೆ ಆಸರೆಯಾಗಿದ್ದು ಮ್ಯಾಕ್ಸ್‌ವೆಲ್ ಮತ್ತು ಎಬಿ ಡಿವಿಲಿಯರ್ಸ್.
ಕೆಕೆಆರ್ ವಿರುದ್ಧ ಸ್ಫೋಟಕ ಬ್ಯಾಟಿಂಗ್ ಮಾಡಿದ್ದ ಗ್ಲೇನ್ ಮ್ಯಾಕ್ಸ್ ವೆಲ್ 49 ಎಸೆತಗಳಲ್ಲಿ 3 ಸಿಕ್ಸ್, 9 ಬೌಂಡರಿ ಸೇರಿದಂತೆ 78 ರನ್ ಬಾರಿಸಿದ್ದರು. ಇದೇ ವೇಳೆ ಎಬಿ ಡಿವಿಲಿಯರ್ಸ್ 34 ಎಸೆತಗಳಲ್ಲಿ 3 ಸಿಕ್ಸರ್, 9 ಬೌಂಡರಿ ಸೇರಿದಂತೆ ಅಜೇಯ 76 ರನ್ ಬಾರಿಸಿದ್ದರು.
ಇದರಿಂದಾಗಿ ಆರ್ ಸಿಬಿ ನಿಗದಿತ ಓವರ್ ನಲ್ಲಿ 4 ವಿಕೆಟ್ ನಷ್ಟಕ್ಕೆ 204 ರನ್ ಬೃಹತ್ ಮೊತ್ತ ಕಲೆ ಹಾಕಿತ್ತು. 205 ರನ್ ಗಳ ಗುರಿ ಬೆನ್ನಟ್ಟಿದ ಕೆಕೆಆರ್ ತಂಡ 166 ರನ್ ಪೇರಿಸಿ 38 ರನ್ ಗಳಿಂದ ಆರ್ ಸಿಬಿಗೆ ಶರಣಾಯಿತು.
ಇನ್ನು ಸ್ಫೋಟಕ ಬ್ಯಾಟಿಂಗ್ ಮಾಡುತ್ತಿದ್ದ ಗ್ಲೇನ್ ಮ್ಯಾಕ್ಸ್ ವೆಲ್ 50 ರನ್ ಬಾರಿಸುತ್ತಿದ್ದಂತೆ ಕೊಹ್ಲಿ ಹುರಿದುಂಬಿಸಿದ್ದು ಆ ವಿಡಿಯೋ ಇದೀಗ ಸಾಮಾಜಿಕ ಜಾಲಾತಣದಲ್ಲಿ ವೈರಲ್ ಆಗಿದೆ.
ಟೂರ್ನಿಯಲ್ಲಿ ಮೂರು ಪಂದ್ಯಗಳನ್ನಾಡಿರುವ ಆರ್ ಸಿಬಿ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿ 6 ಅಂಕಗಳನ್ನು ಸಂಪಾದಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


