ಲಂಕಾ ಕ್ರಿಕೆಟ್ ದಂತಕಥೆ ಮುರಳೀಧರನ್ ಗೆ ಕೊರೋನರಿ ಆ್ಯಂಜಿಯಾಪ್ಲಾಸ್ಟಿ ಶಸ್ತ್ರ ಚಿಕಿತ್ಸೆ ಯಶಸ್ವಿ
ಹೃದಯ ಸಂಬಂಧಿ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಶ್ರೀಲಂಕಾ ಕ್ರಿಕೆಟ್ ದಂತಕಥೆ ಮುತ್ತಯ್ಯ ಮುರಳೀಧರನ್ ಅವರಿಗೆ ಯಶಸ್ವಿ ಕೊರೋನರಿ ಆ್ಯಂಜಿಯಾಪ್ಲಾಸ್ಟಿ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಚೆನ್ನೈ: ಹೃದಯ ಸಂಬಂಧಿ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಶ್ರೀಲಂಕಾ ಕ್ರಿಕೆಟ್ ದಂತಕಥೆ ಮುತ್ತಯ್ಯ ಮುರಳೀಧರನ್ ಅವರಿಗೆ ಯಶಸ್ವಿ ಕೊರೋನರಿ ಆ್ಯಂಜಿಯಾಪ್ಲಾಸ್ಟಿ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ಶ್ರೀಲಂಕಾದ ಕ್ರಿಕೆಟ್ ದಂತಕಥೆ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ಐಪಿಎಲ್ ತಂಡದ ಬೌಲಿಂಗ್ ಕೋಚ್ ಕೂಡ ಆಗಿರುವ ಮುತ್ತಯ್ಯ ಮುರಳೀಧರನ್ ಅವರು ಹೃದಯ ಸಂಬಂಧಿ ಸಮಸ್ಯೆಯಿಂದಾಗಿ ನಿನ್ನೆಯಷ್ಟೇ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಅವರಿಗೆ ನುರಿತ ವೈದ್ಯರ ತಂಡ ಕೊರೋನರಿ ಆ್ಯಂಜಿಯಾಪ್ಲಾಸ್ಟಿ ಶಸ್ತ್ರ ಚಿಕಿತ್ಸೆ ನಡೆಸಿ ಸ್ಟಂಟ್ ಅಳವಡಿಸಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಅಪೋಲೋ ಆಸ್ಪತ್ರೆ ವೈದ್ಯರ ತಂಡ ಇಂದು ಮುರಳೀಧರನ್ ಅವರಿಗೆ ಯಶಸ್ವಿಯಾಗಿ ಕೊರೋನರಿ ಆ್ಯಂಜಿಯಾಪ್ಲಾಸ್ಟಿ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ. ಅಂತೆಯೇ ಅವರಿಗೆ ಸ್ಟಂಟ್ ಅಳವಡಿಸಲಾಗಿದ್ದು, ಇಂದೇ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.
ಮಾರ್ಚ್ ಕೊನೆಗೆ ಮುರಳೀಧರನ್ ಹೃದಯ ನಾಳದಲ್ಲಿ ತಡೆ (ಬ್ಲಾಕ್) ಕಾಣಿಸಿಕೊಂಡಿತ್ತು. ಆದ್ದರಿಂದ ಆಂಜಿಯೋಪ್ಲಾಸ್ಟಿ ನಡೆಸಬೇಕಾಯಿತು. ಇದೀಗ ಆರೋಗ್ಯವಾಗಿದ್ದು, ಇಂದೇ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


