ಕ್ರಿಕೆಟ್

ಪಡಿಕ್ಕಲ್ ಸ್ಫೋಟಕ ಶತಕ: ಕೊಹ್ಲಿ ಪಡೆಗೆ ಸತತ 4ನೇ ಗೆಲುವು, ಅಗ್ರಸ್ಥಾನಕ್ಕೇರಿದ ಆರ್ ಸಿಬಿ!

ಆರ್ ಸಿಬಿ ಪರ ಸ್ಫೋಟಕ ಬ್ಯಾಟಿಂಗ್ ಮಾಡಿದ ದೇವದತ್ ಪಡಿಕ್ಕಲ್ ತಂಡಕ್ಕೆ 10 ವಿಕೆಟ್ ಗಳಿಂದ ಭರ್ಜರಿ ಗೆಲುವು ತಂದುಕೊಟ್ಟಿದ್ದಾರೆ.

ಪಡಿಕ್ಕಲ್ ಸ್ಫೋಟಕ ಶತಕ: ಕೊಹ್ಲಿ ಪಡೆಗೆ ಸತತ 4ನೇ ಗೆಲುವು, ಅಗ್ರಸ್ಥಾನಕ್ಕೇರಿದ ಆರ್ ಸಿಬಿ!
ಆರ್ ಸಿಬಿ
Published On :

ಮುಂಬೈ: ಆರ್ ಸಿಬಿ ಪರ ಸ್ಫೋಟಕ ಬ್ಯಾಟಿಂಗ್ ಮಾಡಿದ ದೇವದತ್ ಪಡಿಕ್ಕಲ್ ತಂಡಕ್ಕೆ 10 ವಿಕೆಟ್ ಗಳಿಂದ ಭರ್ಜರಿ ಗೆಲುವು ತಂದುಕೊಟ್ಟಿದ್ದಾರೆ. 

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ರಾಜಸ್ತಾನ ನಿಗದಿತ ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 177 ರನ್ ಪೇರಿಸಿತ್ತು. ಇನ್ನು ಆರ್ ಆರ್ ನೀಡಿದ 178 ರನ್ ಗಳ ಗುರಿ ಬೆನ್ನಟ್ಟಿದ ಆರ್ ಸಿಬಿ ತಂಡ ವಿಕೆಟ್ ನಷ್ಟವಿಲ್ಲದೆ 181 ರನ್ ಬಾರಿಸಿ ಗೆಲುವಿನ ನಗೆ ಬೀರಿತು. 

ಆರ್ ಸಿಬಿ ಪರ ದೇವದತ್ ಪಡಿಕ್ಕಲ್ 101 ರನ್ ಬಾರಿಸಿದ್ದು ನಾಯಕ ವಿರಾಟ್ ಕೊಹ್ಲಿ 72 ರನ್ ಬಾರಿಸಿದ್ದಾರೆ. 

ರಾಜಸ್ತಾನ ಪರ ಜೋಸ್ ಬಟ್ಲರ್ 8, ಮನನ್ ವೊವ್ರಾ 7 ಮತ್ತು ಡೇವಿಡ್ ಮಿಲ್ಲರ್ ಶೂನ್ಯಕ್ಕೆ ಔಟಾಗಿದ್ದರು. ನಾಯಕ ಸಂಜು ಸ್ಯಾಮ್ಸನ್ 21, ರಿಯಾನ್ ಪರಾಗ್ 25, ಶಿವಂ ದುಬೆ 46, ರಾಹುಲ್ ತೆವಾಟಿಯಾ 40 ರನ್ ಪೇರಿಸಿದ್ದಾರೆ. 

ಬೆಂಗಳೂರು ಪರ  ಮೊಹಮ್ಮದ್ ಸಿರಾಜ್ ಮತ್ತು ಹರ್ಷಲ್ ಪಟೇಲ್ 3 ಮತ್ತು ಜ್ಯಾಮಿನ್ಸನ್, ರಿಚರ್ಡ್ಸನ್ ಮತ್ತು ಸುಂದರ್ 1 ವಿಕೆಟ್ ಪಡೆದಿದ್ದಾರೆ. 

ಐಪಿಎಲ್ 14ನೇ ಆವೃತ್ತಿಯಲ್ಲಿ ಸತತ ನಾಲ್ಕನೇ ಗೆಲುವು ದಾಖಲಿಸಿರುವ ಆರ್ ಸಿಬಿ ತಂಡ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.