ಐಪಿಎಲ್ ಟ್ವೆಂಟಿ-20: ಆರ್‌ಸಿಬಿ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 69 ರನ್ ಗೆಲುವು
ಮುಂಬೈನ ವಾಖೆಂಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 69 ರನ್ ಗಳಿಂದ ಗೆಲುವು ಸಾಧಿಸಿದೆ.

ಮುಂಬೈ: ಮುಂಬೈನ ವಾಖೆಂಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 69 ರನ್ ಗಳಿಂದ ಗೆಲುವು ಸಾಧಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ್ದ ಚೆನ್ನೈ ರವೀಂದ್ರ ಜಡೇಜಾ ಅವರ ಅಬ್ಬರದ ಬ್ಯಾಟಿಂಗ್ ನೆರವಿನೊಂದಿಗೆ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 191 ರನ್ ಗಳ ಬೃಹತ್ ಮೊತ್ತ ಪೇರಿಸಿತು.
ಗೆಲುವಿಗೆ 192 ರನ್ ಗಳ ಗುರಿಯನ್ನು ಬೆನ್ನಟ್ಟಿದ ಬೆಂಗಳೂರು ತಂಡದ ಪರ ಕನ್ನ್ಡಿಗ ಪಡಿಕ್ಕಲ್ (34) ಹಾಗೂ ಮ್ಯಾಕ್ಸ್ ವೆಲ್ (22) ಮಾತ್ರವೇ ತುಸು ಉತ್ತಮ ಪ್ರದರ್ಶನ ನೀಡಿದ್ದ ಹೊರತು ಉಳಿದಾರೂ ಇಪ್ಪತ್ತು ರನ್ ಗಡಿ ತಲುಪಲಿಲ್ಲ.
ನಾಯಕ ಕೊಹ್ಲಿ (8), ವಾಷಿಂಗ್ಟನ್ ಸುಂದರ್ (7), ಎಬಿಡಿ (4) ಸೇರಿ ಪ್ರಮುಖರೆಲ್ಲಾ ಒಂದಂಕಿಗಳನ್ನು ದಾಟುವಷ್ಟರಲ್ಲೇ ಪೆವಿಲಿಯನ್ ಸೇರಿದ್ದರು. ಈ ಮೂಲಕ ಬೆಂಗಳೂರು ಇಪ್ಪತ್ತು ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 122 ರನ್ ಗಳಿಸುವಷ್ಟಕ್ಕೆ ತೃಪ್ತಿಪಟ್ಟಿದೆ. ಈ ಮೂಲಕ ಸಿಎಸ್ ಕೆ ತಂಡ ಐಪಿಎಲ್ ನಲ್ಲಿ ಬೆಂಗಳೂರು ತಂಡದ ಜಯದ ಸರಣಿಯನ್ನು ತುಂಡರಿಸಿದೆ ಮಾತ್ರವಲ್ಲದೆ ಅಂಕಪಟ್ಟಿಯಲ್ಲಿ ನಂ.. 1 ಸ್ಥಾನಕ್ಕೇರಿದೆ.
ಚೆನ್ನೈ ಪರ ರವೀಂದ್ರ ಜಡೇಜಾ 3, ತಹೀರ್ 2, ಸ್ಯಾಮ್ ಕರ್ರನ್ ಹಾಗೂ ಶಾರ್ದೂಲ್ ಠಾಕೂರ್ ತಲಾ ಒಂದು ವಿಕೆಟ್ ಪಡೆದು ಮಿಂಚಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


