ಐಪಿಎಲ್ 2021: ಪಂಜಾಬ್ ಕಿಂಗ್ಸ್ ವಿರುದ್ಧ ಕೋಲ್ಕತಾಗೆ 5 ವಿಕೆಟ್ ಗಳ ಭರ್ಜರಿ ಜಯ
ನಾಯಕ ಇಯಾನ್ ಮಾರ್ಗನ್(47) ಹಾಗೂ ರಾಹುಲ್ ತ್ರಿಪಾಠಿ(41) ಅವರ ಅಬ್ಬರದ ಬ್ಯಾಟಿಂಗ್ ನೆರವಿನೊಂದಿಗೆ ಕೋಲ್ಕತಾ ನೈಟ್ ರೈಡರ್ಸ್ ತಂಡ ಪಂಜಾಬ್ ಕಿಂಗ್ಸ್ ವಿರುದ್ಧ 5 ವಿಕೆಟ್ ಗಳ ಭರ್ಜರಿ ಜಯ ದಾಖಲಿಸಿದೆ.

ಅಹಮದಾಬಾದ್: ನಾಯಕ ಇಯಾನ್ ಮಾರ್ಗನ್(47) ಹಾಗೂ ರಾಹುಲ್ ತ್ರಿಪಾಠಿ(41) ಅವರ ಅಬ್ಬರದ ಬ್ಯಾಟಿಂಗ್ ನೆರವಿನೊಂದಿಗೆ ಕೋಲ್ಕತಾ ನೈಟ್ ರೈಡರ್ಸ್ ತಂಡ ಪಂಜಾಬ್ ಕಿಂಗ್ಸ್ ವಿರುದ್ಧ 5 ವಿಕೆಟ್ ಗಳ ಭರ್ಜರಿ ಜಯ ದಾಖಲಿಸಿದೆ. ಇದರೊಂದಿಗೆ ಕೆಕೆಆರ್ ಸತತ ನಾಲ್ಕು ಸೋಲುಗಳ ಸರಣಿಯಯನ್ನು ಕಳಚಿಕೊಂಡಿದೆ.
ಇಂದು ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ , ಒಂಬತ್ತು ವಿಕೆಟ್ ನಷ್ಟಕ್ಕೆ ಕೇವಲ 123 ರನ್ ಗಳಿಸಲಷ್ಟೇ ಶಕ್ತವಾಯಿತು.
ಗೆಲುವಿಗೆ 124 ರನ್ ಗಳ ಗುರಿ ಬೆನ್ನತ್ತಿದ ಕೆಕೆಆರ್ ಒಂದು ಹಂತದಲ್ಲಿ 17 ರನ್ನಿಗೆ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದರೂ ತ್ರಿಪಾಠಿ ಹಾಗೂ ನಾಯಕ ಮಾರ್ಗನ್ ಅವರ ಅರ್ಧಶತಕದ ಜೊತೆಯಾಟ ತಂಡವನ್ನು ಗೆಲುವಿನ ದಡ ಸೇರಿಸಲು ನೆರವಾಯಿತು. 16. 4 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ ಕೆಕೆಆರ್ ಗೆಲುವಿನ ಗುರಿ ತಲುಪಿತು.
ಈ ಗೆಲುವಿನೊಂದಿಗೆ ಕೆಕೆಆರ್ ಆಡಿರುವ ಆರು ಪಂದ್ಯಗಳಲ್ಲಿ ಒಟ್ಟು ನಾಲ್ಕು ಅಂಕಗಳೊಂದಿಗೆ ಕೊನೆಯ ಸ್ಥಾನದಿಂದ ಐದನೇ ಸ್ಥಾನಕ್ಕೆ ಜಿಗಿದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


