ಐಪಿಎಲ್ 2021: ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆ 7 ವಿಕೆಟ್‍ಗಳ ಭರ್ಜರಿ ಗೆಲುವು
ಆರಂಭಿಕ ಆಟಗಾರರಾದ ಪೃಥ್ವಿ ಶಾ(82) ಹಾಗೂ ಶಿಖರ್ ಧವನ್ ಅವರ ಅಬ್ಬರದ ಬ್ಯಾಟಿಂಗ್ ನೆರವಿನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ 7 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ಅಹಮದಾಬಾದ್: ಆರಂಭಿಕ ಆಟಗಾರರಾದ ಪೃಥ್ವಿ ಶಾ(82) ಹಾಗೂ ಶಿಖರ್ ಧವನ್ ಅವರ ಅಬ್ಬರದ ಬ್ಯಾಟಿಂಗ್ ನೆರವಿನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ 7 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.
ಇಂದು ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಕೆಕೆಆರ್, ಆ್ಯಂಡ್ರೆ ರಸೆಲ್(45) ಮತ್ತು ಶುಭಮನ್ ಗಿಲ್ (43) ಅವರ ಸಮಯೋಚಿತ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 154 ರನ್ ಗಳಿಸಲಷ್ಟೇ ಶಕ್ತವಾಯಿತು.
ಗೆಲುವಿಗೆ 155 ರನ್ ಗಳ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್, ಕೇವಲ 16.3 ಓವರ್ ಗಳಲ್ಲೇ ಗೆಲುವಿನ ಗುರಿ ತಲುಪಿತು. ಇದರೊಂದಿಗೆ ಅಂಕಪಟ್ಟಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಎರಡನೇ ಸ್ಥಾನಕ್ಕೇರಿದೆ.
ಪೃಥ್ವಿ ಶಾ ಕೆಕೆಆರ್ ಎದುರು 18 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ, ಐಪಿಎಲ್ 2021 ಟೂರ್ನಿಯ ಅತಿ ವೇಗದ ಫಿಫ್ಟಿ ತಮ್ಮದಾಗಿಸಿಕೊಂಡರು. ಮೊದಲ ಓವರ್‌ನಲ್ಲೇ ಶಿವಂ ಮಾವಿ ಎದುರು ಆರು ಎಸೆತಗಳಲ್ಲಿ 6 ಫೋರ್ ಬಾರಿಸಿದ ಶಾ, 41 ಎಸೆತಗಳಲ್ಲಿ 11 ಫೋರ್ ಮತ್ತು 3 ಸಿಕ್ಸರ್‌ಗಳೊಂದಿಗೆ 82 ರನ್ ಸಿಡಿಸುವ ಮೂಲಕ ಪಂದ್ಯ ಶ್ರೇಷ್ಠ ಆಟಗಾರನಾಗಿ ಹೊರಹೊಮ್ಮಿದರು.
ಡೆಲ್ಲಿ ಕ್ಯಾಪಿಟಲ್ಸ್ ಪರ ಪೃಥ್ವಿ ಶಾ 82, ಶಿಖರ್ ಧವನ್ 46, ರಿಷಭ್ ಪಂತ್ 16; ಪ್ಯಾಟ್ ಕಮಿನ್ಸ್ 24 ರನ್ ಗಳಿಸಿದರೆ, ಕೋಲ್ಕತಾ ನೈಟ್ ರೈಡರ್ಸ್ ಪರ ಶುಭಮನ್ ಗಿಲ್ 41, ರಾಹುಲ್ ತ್ರಿಪಾಠಿ 19, ಆಂಡ್ರೆ ರಸೆಲ್ ಔಟಾಗದೆ 45 ರನ್ ಗಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


