ಕ್ರಿಕೆಟ್

ಐಪಿಎಲ್ 2021: ರಾಜಸ್ತಾನ ರಾಯಲ್ಸ್ ವಿರುದ್ಧ 7 ವಿಕೆಟ್‍ಗಳಿಂದ ಗೆಲುವು ಸಾಧಿಸಿದ ಮುಂಬೈ

ಕ್ವಿಂಟನ್ ಡಿಕಾಕ್ ರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ತಂಡ ರಾಜಸ್ತಾನ ರಾಯಲ್ಸ್ ವಿರುದ್ಧ 7 ವಿಕೆಟ್ ಗಳಿಂದ ಗೆಲುವು ಸಾಧಿಸಿದೆ.

ಐಪಿಎಲ್ 2021: ರಾಜಸ್ತಾನ ರಾಯಲ್ಸ್ ವಿರುದ್ಧ 7 ವಿಕೆಟ್‍ಗಳಿಂದ ಗೆಲುವು ಸಾಧಿಸಿದ ಮುಂಬೈ
ಡಿ-ಕಾಕ್
Published On :

ದೆಹಲಿ: ಕ್ವಿಂಟನ್ ಡಿಕಾಕ್ ರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ತಂಡ ರಾಜಸ್ತಾನ ರಾಯಲ್ಸ್ ವಿರುದ್ಧ 7 ವಿಕೆಟ್ ಗಳಿಂದ ಗೆಲುವು ಸಾಧಿಸಿದೆ. 

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ತಾನ ರಾಯಲ್ಸ್ ತಂಡದ 171 ರನ್ ಪೇರಿಸಿತ್ತು. ರಾಜಸ್ತಾನ ನೀಡಿದ 172 ರನ್ ಗಳ ಗುರಿ ಬೆನ್ನಟ್ಟಿದ ಮುಂಬೈ ತಂಡದ 3 ವಿಕೆಟ್ ನಷ್ಟಕ್ಕೆ 172 ರನ್ ಬಾರಿಸಿ ಗೆಲುವಿನ ನಗೆ ಬೀರಿತು.

ರಾಜಸ್ತಾನ ಪರ ಜೋಸ್ ಬಟ್ಲರ್ 41, ಜೈಸ್ವಾಲ್ 32, ಸಂಜು ಸ್ಯಾಮ್ಸನ್ 42 ಮತ್ತು ಶಿವಂ ದುಬೈ 35 ರನ್ ಪೇರಿಸಿದ್ದಾರೆ. 

ಮುಂಬೈ ಪರ ರೋಹಿತ್ ಶರ್ಮಾ 14, ಡಿಕಾಕ್ 70, ಸೂರ್ಯಕುಮಾರ್ 16, ಕೃನಾಲ್ ಪಾಂಡ್ಯ 39 ಮತ್ತು ಕಿರನ್ ಪೋಲಾರ್ಡ್ ಅಜೇಯ 16 ರನ್ ಸಿಡಿಸಿದ್ದಾರೆ. 

ಟೂರ್ನಿಯಲ್ಲಿ 6 ಪಂದ್ಯಗಳ ಪೈಕಿ ಮುಂಬೈ ಇಂಡಿಯನ್ಸ್ ತಂಡ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.