ಜೀವನ್ಮರಣ ಹೋರಾಟದಲ್ಲಿ ನ್ಯೂಜಿಲೆಂಡ್ ಆಲ್ರೌಂಡರ್ 'ಕ್ರಿಸ್ ಕೇರ್ನ್ಸ್'
ನ್ಯೂಜಿಲೆಂಡ್ ಕ್ರಿಕೆಟ್ ತಂಡದ ಮಾಜಿ ಸ್ಟಾರ್ ಆಲ್ರೌಂಡರ್ ಕ್ರಿಸ್ ಕೇರ್ನ್ಸ್ ಆರೋಗ್ಯ ತೀವ್ರ ಹದಗೆಟ್ಟಿದ್ದು, ಅವರು ಜೀವನ್ಮರಣ ಹೋರಾಟದಲ್ಲಿದ್ದಾರೆ ಎಂದು ತಿಳಿದುಬಂದಿದೆ.

ಕ್ಯಾನ್ ಬೆರಾ: ನ್ಯೂಜಿಲೆಂಡ್ ಕ್ರಿಕೆಟ್ ತಂಡದ ಮಾಜಿ ಸ್ಟಾರ್ ಆಲ್ರೌಂಡರ್ ಕ್ರಿಸ್ ಕೇರ್ನ್ಸ್ ಆರೋಗ್ಯ ತೀವ್ರ ಹದಗೆಟ್ಟಿದ್ದು, ಅವರು ಜೀವನ್ಮರಣ ಹೋರಾಟದಲ್ಲಿದ್ದಾರೆ ಎಂದು ತಿಳಿದುಬಂದಿದೆ.
ಹೃದಯ ಸಂಬಂಧಿ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಕ್ರಿಸ್ ಕೇರ್ನ್ಸ್ ಆರೋಗ್ಯ ಗಂಭೀರವಾಗಿದ್ದು ಅವರಿಗೆ ಕೃತ ಉಸಿರಾಟ ವ್ಯವಸ್ಥೆ ಅಳವಡಿಸಲಾಗಿದೆ ಎಂದು ತಿಳಿದುಬಂದಿದೆ. ನ್ಯೂಜಿಲೆಂಡ್ ಕ್ಯಾನ್‌ಬೆರಾ ಆಸ್ಪತ್ರೆಯಲ್ಲಿ ಕ್ರಿಸ್ ಕೇರ್ನ್ಸ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ನ್ಯೂಶಬ್ ಮಂಗಳವಾರ ವರದಿ ಮಾಡಿದೆ.
51 ವರ್ಷದ ಕ್ರಿಸ್ ಕೇರ್ನ್ಸ್ ಅವರು ಕಳೆದ ವಾರ ಕ್ಯಾನ್ಬೆರಾದಲ್ಲಿ ತಮ್ಮ ಹೃದಯ ಸಂಬಂಧಿ ಸಮಸ್ಯೆಗೆ ತುತ್ತಾಗಿದ್ದರು. ಬಳಿಕ ಅವರಿಗೆ ಹಲವು ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು. ಆದರೆ ಆಶಿಸಿದಂತೆ ಚಿಕಿತ್ಸೆಗೆ ಅವರು ಪ್ರತಿಕ್ರಿಯಿಸಿಲ್ಲ, ಹೀಗಾಗಿ ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆ ಅಳವಡಿಸಲಾಗಿದೆ.
ಮೂಲಗಳ ಪ್ರಕಾರ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಆಸ್ಟ್ರೇಲಿಯಾದ ಸಿಡ್ನಿಯ ತಜ್ಞ ಆಸ್ಪತ್ರೆಗೆ ವರ್ಗಾಯಿಸಲಾಗುವುದು ಎಂದು ಹೇಳಲಾಗಿದೆ.
ಕೇರ್ನ್ಸ್ 1989 ಮತ್ತು 2006 ರ ನಡುವೆ ನ್ಯೂಜಿಲೆಂಡ್ ಪರ 62 ಟೆಸ್ಟ್, 215 ಏಕದಿನ ಮತ್ತು ಎರಡು ಟಿ 20 ಪಂದ್ಯಗಳನ್ನು ಆಡಿದ್ದಾರೆ. ಅನುಭವಿ ಆಲ್ ರೌಂಡರ್ 33 ಕ್ಕೂ ಅಧಿಕ ಸರಾಸರಿಯಲ್ಲಿ 3,320 ಟೆಸ್ಟ್ ರನ್ ಗಳಿಸಿದ್ದರು. ಕೇವಲ 29ರ ಸರಾಸರಿಯಲ್ಲಿ 218 ವಿಕೆಟ್ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


