ಕ್ರಿಕೆಟ್

ಭಾರತ- ಇಂಗ್ಲೆಂಡ್ ಎರಡನೇ ಟೆಸ್ಟ್: ಮೋಯಿನ್ ಅಲಿಗೆ ಸ್ಥಾನ

ಭಾರತ ವಿರುದ್ಧ ಆಗಸ್ಟ್ 12 ರಿಂದ 16 ರ ವರೆಗೆ ಇಲ್ಲಿನ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಕ್ರಿಕೆಟ್ ಪಂದ್ಯಕ್ಕೆ ಸ್ಪಿನ್ ಬೌಲರ್ ಹಾಗೂ ಆಲ್‌ರೌಂಡರ್ ಮೋಯಿನ್ ಅಲಿ ಅವರನ್ನು ಇಂಗ್ಲೆಂಡ್ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ಭಾರತ- ಇಂಗ್ಲೆಂಡ್ ಎರಡನೇ ಟೆಸ್ಟ್: ಮೋಯಿನ್ ಅಲಿಗೆ ಸ್ಥಾನ
ಮೋಯಿನ್ ಅಲಿ
Published On :

ಲಂಡನ್:  ಪ್ರವಾಸಿ ಭಾರತ ವಿರುದ್ಧ ಆಗಸ್ಟ್ 12 ರಿಂದ 16 ರ ವರೆಗೆ ಇಲ್ಲಿನ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಕ್ರಿಕೆಟ್ ಪಂದ್ಯಕ್ಕೆ ಸ್ಪಿನ್ ಬೌಲರ್ ಹಾಗೂ ಆಲ್‌ರೌಂಡರ್ ಮೋಯಿನ್ ಅಲಿ ಅವರನ್ನು ಇಂಗ್ಲೆಂಡ್ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. 

ನ್ಯಾಟಿಂಗ್‌ಹ್ಯಾಮ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ತಂಡ ಕಳಪೆ ಪ್ರದರ್ಶನ ನೀಡಿದ್ದು, ಸೋಲಿನ ಭೀತಿ ಎದುರಿಸುತ್ತಿತ್ತು. ಆದರೆ ಮಳೆ ಕಾರಣ ಐದನೇ ಹಾಗೂ ಅಂತಿಮ ದಿನದ ಆಟ ನಡೆಯದೇ ಹೋಗಿದ್ದರಿಂದ ಇಂಗ್ಲೆಂಡ್ ತಂಡ ಸೋಲಿನ ದವಡೆಯಿಂದ ಪಾರಾಗಿತ್ತು.   

ಮೊದಲನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್‌ ತನ್ನ ಪ್ಲೇಯಿಂಗ್‌ ಇಲೆವೆನ್‌ನಲ್ಲಿ ಸ್ಪಿನ್ನರ್‌ಗೆ ಅವಕಾಶ ನೀಡಿರಲಿಲ್ಲ. ಆದರೆ, ಲಾರ್ಡ್ಸ್‌ನಲ್ಲಿ ಆರಂಭವಾಗಲಿರುವ ಎರಡನೇ ಪಂದ್ಯದಲ್ಲಿ ತಂಡದ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ಎರಡೂ ವಿಭಾಗಗಳನ್ನು ಬಲಿಷ್ಠಗೊಳಿಸುವ ಸಲುವಾಗಿ ಇಂಗ್ಲೆಂಡ್‌ ತನ್ನ ಪ್ಲೇಯಿಂಗ್‌ ಇಲೆವೆನ್‌ನಲ್ಲಿ ಮೊಯೀನ್‌ ಅಲಿಗೆ ಅವಕಾಶ ಕಲ್ಪಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.