ಕ್ರಿಕೆಟ್

ಲಾರ್ಡ್ಸ್‌ನಲ್ಲಿ ಶತಕ ಸಿಡಿಸಿದ ಟೀಂ ಇಂಡಿಯಾದ ಕೆಎಲ್ ರಾಹುಲ್!

ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಆರಂಭಿಕ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಶತಕ ಸಿಡಿಸಿದ್ದಾರೆ.

ಲಾರ್ಡ್ಸ್‌ನಲ್ಲಿ ಶತಕ ಸಿಡಿಸಿದ ಟೀಂ ಇಂಡಿಯಾದ ಕೆಎಲ್ ರಾಹುಲ್!
ಕೆಎಲ್ ರಾಹುಲ್
Published On :

ಲಾರ್ಡ್ಸ್: ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಆರಂಭಿಕ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಶತಕ ಸಿಡಿಸಿದ್ದಾರೆ. 

ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ಜೊತೆ ಆರಂಭಿಕರಾಗಿ ಕಣಕ್ಕಿಳಿದ ಕೆಎಲ್ ರಾಹುಲ್ ಅತ್ಯುತ್ತಮ ಪ್ರದರ್ಶನ ನೀಡಿದ್ದು ಶತಕ ಬಾರಿಸಿದ್ದಾರೆ. 

ಕೆಎಲ್ ರಾಹುಲ್ 137 ಎಸೆತಗಳಲ್ಲಿ ಅರ್ಧ ಶತಕ ಸಿಡಿಸಿದ್ದು 210 ಎಸೆತಗಳಲ್ಲಿ ಶತಕ ಪೂರೈಸಿದರು. ಪ್ರಸ್ತತ ಕೆಎಲ್ ರಾಹುಲ್ 241 ಎಸೆತಗಳಲ್ಲಿ ಅಜೇಯ 124 ರನ್ ಬಾರಿಸಿ ಆಡುತ್ತಿದ್ದಾರೆ. 

ಟೆಸ್ಟ್ ಕ್ರಿಕೆಟ್ ನಲ್ಲಿ ಕೆಎಲ್ ರಾಹುಲ್ ಒಟ್ಟು 6 ಶತಕ ಬಾರಿಸಿದ್ದು 11 ಅರ್ಧ ಶತಕ ಸಿಡಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.