ಐಸಿಸಿ ಟಿ20 ವಿಶ್ವಕಪ್: ಅಕ್ಟೋಬರ್ 24ಕ್ಕೆ ಭಾರತ-ಪಾಕ್ ಪಂದ್ಯ
ಪ್ರಸಕ್ತ ಸಾಲಿನಲ್ಲಿ ಯುಎಇ ಹಾಗೂ ಓಮನ್‌ನಲ್ಲಿ ನಡೆಯಲಿರುವ ಬಹುನಿರೀಕ್ಷಿತ ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಯ ವೇಳಾಪಟ್ಟಿಯನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಮಂಗಳವಾರ ಬಿಡುಗಡೆ ಮಾಡಿದೆ.

ನವದೆಹಲಿ: ಪ್ರಸಕ್ತ ಸಾಲಿನಲ್ಲಿ ಯುಎಇ ಹಾಗೂ ಓಮನ್‌ನಲ್ಲಿ ನಡೆಯಲಿರುವ ಬಹುನಿರೀಕ್ಷಿತ ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಯ ವೇಳಾಪಟ್ಟಿಯನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಮಂಗಳವಾರ ಬಿಡುಗಡೆ ಮಾಡಿದೆ.
ವೇಳಾಪಟ್ಟಿಯನ್ವಯ ಟೂರ್ನಿಗೆ ಅಕ್ಟೋಬರ್ 17 ರಂದು ಚಾಲನೆ ಸಿಗಲಿದ್ದು, ನವೆಂಬರ್ 14 ರಂದು ಫೈನಲ್ ಪಂದ್ಯ ನಡೆಯಲಿದೆ ಎಂದು ತಿಳಿದುಬಂದಿದೆ.
ಅಕ್ಟೋಬರ್ 17 ಮೊದಲ ರೌಂಡ್ ಪಂದ್ಯ ಒಮನ್ ಮತ್ತು ಪಿಎನ್ಜಿ ನಡುವೆ ನಡೆಯಲಿದ್ದು, ಸಾಕಷ್ಟು ರೋಚಕತೆ ಸೃಷ್ಟಿಸಲಿರುವ ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯ ಅಕ್ಟೋಬರ್ 24 ರಂದು ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಟೂರ್ನಿಯ ಮೊದಲ ಸೂಪರ್ 12 ಪಂದ್ಯ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ನಡುವೆ ಅ. 23ಕ್ಕೆ ಆರಂಭವಾಗಲಿದೆ ಎಂದು ವರದಿಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


