3ನೇ ಟೆಸ್ಟ್: ಅಭ್ಯಾಸ ಆರಂಭಿಸಿದ ವಿರಾಟ್ ಕೊಹ್ಲಿ ಪಡೆ; ಶಾರ್ದೂಲ್ ಫಿಟ್!
ಪ್ರವಾಸಿ ಭಾರತ ಹಾಗೂ ಆತಿಥೇಯ ಇಂಗ್ಲೆಂಡ್ ತಂಡಗಳ ನಡುವಣ ಐದು ಟೆಸ್ಟ್ ಪಂದ್ಯಗಳ ಸರಣಿಯ ಮೂರನೇ ಟೆಸ್ಟ್ ಪಂದ್ಯ ಬುಧವಾರ ಇಲ್ಲಿ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಭಾರತ ಆಟಗಾರರು ಅಭ್ಯಾಸ ಆರಂಭಿಸಿದ್ದಾರೆ.

ಹೆಡಿಂಗ್ಲೆ: ಪ್ರವಾಸಿ ಭಾರತ ಹಾಗೂ ಆತಿಥೇಯ ಇಂಗ್ಲೆಂಡ್ ತಂಡಗಳ ನಡುವಣ ಐದು ಟೆಸ್ಟ್ ಪಂದ್ಯಗಳ ಸರಣಿಯ ಮೂರನೇ ಟೆಸ್ಟ್ ಪಂದ್ಯ ಬುಧವಾರ ಇಲ್ಲಿ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಭಾರತ ಆಟಗಾರರು ಅಭ್ಯಾಸ ಆರಂಭಿಸಿದ್ದಾರೆ.
ಭಾನುವಾರ ನಾಯಕ ವಿರಾಟ್ ಕೊಹ್ಲಿ, ಉಪನಾಯಕ ಅಜಿಂಕ್ಯ ರಹಾನೆ, ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ ಹಾಗೂ ಕೆ.ಎಲ್.ರಾಹುಲ್ ಹಾಗೂ ವಿಕೇಟ್ ಕೀಪರ್ ಬ್ಯಾಟ್ಸ್ ಮನ್ ರಿಷಬ್ ಪಂತ್ ಕಠಿಣ ಬ್ಯಾಟಿಂಗ್ ಅಭ್ಯಾಸ ನಡೆಸಿದರು.
ಇದೇ ವೇಳೆಗೆ ಭಾರತ ತಂಡದ ಪ್ರಮುಖ ವೇಗದ ಬೌಲರ್ ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಶಮಿ, ಸ್ವಿನ್ನರ್ಗಳಾದ ರವೀಚಂದ್ರನ್ ಹಾಗೂ ರವೀಂದ್ರ ಜಡೇಜಾ ಮೈದಾನದಲ್ಲಿ ಬೆವರು ಹರಿಸಿದರು.
19 ವರ್ಷಗಳ ನಂತರ ಭಾರತ ತಂಡ ಹೆಡಿಂಗ್ಲೆಯಲ್ಲಿ ಟೆಸ್ಟ್ ಪಂದ್ಯವನ್ನು ಆಡಲು ಸಜ್ಜಾಗಿದೆ. 2002 ರಲ್ಲಿ ಭಾರತ ಇಲ್ಲಿ ತನ್ನ ಕೊನೆಯ ಟೆಸ್ಟ್ ಪಂದ್ಯ ಆಡಿತ್ತು. ಆ ಟೆಸ್ಟ್ ಪಂದ್ಯದಲ್ಲಿ ಭಾರತ ಇನ್ನಿಂಗ್ಸ್ ಹಾಗೂ 46 ರನ್ಗಳಿಂದ ಜಯ ದಾಖಲಿಸಿತ್ತು.
ಟ್ರೇಂಟ್ಬ್ರಿಡ್ಜ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಮೇಲುಗೈ ಸಾಧಿಸಿದ್ದ ಭಾರತ ಸುಲಭವಾಗಿ ಗೆಲುವು ದಾಖಲಿಸಬಹುದಾಗಿತ್ತು.
ಲಂಡನ್ನ ಲಾರ್ಡ್ಸ್ ಮೈದಾನದಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದ ಐದನೇ ಹಾಗೂ ಕೊನೆಯ ದಿನ ಪಂದ್ಯ ನಾಟಕೀಯ ತಿರುವು ಪಡೆದು ಡ್ರಾ ಹಾದಿ ಹಿಡಿದಿದ್ದ ಟೆಸ್ಟ್ ಪಂದ್ಯದಲ್ಲಿ ಭಾರತ ಗೆಲುವು ದಾಖಲಿಸಿ ಐತಿಹಾಸಿಕ ಸಾಧನೆಯೊಂದಿಗೆ 1-0 ರ ಮುನ್ನಡೆ ಪಡೆಯಿತು.
ಶಾರ್ದೂಲ್ ಠಾಕೂರ್ ಫಿಟ್!
ಭಾರತದ ವೇಗದ ಬೌಲರ್ ಶಾರ್ದೂಲ್ ಠಾಕೂರ್ ಮೂರನೇ ಟೆಸ್ಟ್ಗೆ ಪರಿಗಣಿಸಲು ಅರ್ಹರಾಗಿದ್ದರೂ, ಆಡುವ ಇಲೆವೆನ್ನಲ್ಲಿ ಅವರಿಗೆ ಇನ್ನೂ ಖಾತರಿ ಇಲ್ಲ. ಶಾರ್ದೂಲ್ ಫಿಟ್ ಅಂಡ್ ಫೈನ್. ಅವರು ಆಯ್ಕೆಗೆ ಸಿದ್ಧರಾಗಿದ್ದಾರೆ. ನಾವು ಯಾವ ಸಂಯೋಜನೆಯೊಂದಿಗೆ ಹೋಗುತ್ತಿದ್ದೇವೆ ಎಂಬುದನ್ನು ನೋಡಬೇಕು ಎಂದು ಭಾರತ ಉಪನಾಯಕ ಅಜಿಂಕ್ಯ ರಹಾನೆ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


