ಕ್ರಿಕೆಟ್

2ನೇ ಟೆಸ್ಟ್: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 372 ರನ್ ಗಳ ಭರ್ಜರಿ ಜಯ

ನ್ಯೂಜಿಲೆಂಡ್ ವಿರುದ್ಧದ ನಡೆದ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 372 ರನ್ ಗಳ ಭರ್ಜರಿ ಜಯ ಸಾಧಿಸುವ ಮೂಲಕ 2 ಪಂದ್ಯಗಳ ಸರಣಿಯನ್ನು ಕೈ ವಶ ಮಾಡಿಕೊಂಡಿದೆ.

2ನೇ ಟೆಸ್ಟ್: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 372 ರನ್ ಗಳ ಭರ್ಜರಿ ಜಯ
ಭಾರತಕ್ಕೆ ಜಯ
Published On :

ನವದೆಹಲಿ: ನ್ಯೂಜಿಲೆಂಡ್ ವಿರುದ್ಧದ ನಡೆದ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 372 ರನ್ ಗಳ ಭರ್ಜರಿ ಜಯ ಸಾಧಿಸುವ ಮೂಲಕ 2 ಪಂದ್ಯಗಳ ಸರಣಿಯನ್ನು ಕೈ ವಶ ಮಾಡಿಕೊಂಡಿದೆ. 

ಭಾರತ ನೀಡಿದ 450ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಕಿವೀಸ್ ಪಡೆ ಕೇವಲ 167ರನ್ ಗಳಿಗೆ ಆಲೌಟ್ ಆಗುವ ಮೂಲಕ ಭಾರತದ ವಿರುದ್ಧ 372 ರನ್ ಗಳ ಹೀನಾಯ ಸೋಲು ಕಂಡಿತು. ಆ ಮೂಲಕ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ನಾಲ್ಕನೇ ದಿನದಲ್ಲಿಯೇ ಪಂದ್ಯ ಮುಕ್ತಾಯವಾಗಿದ್ದು ಟೀಮ್ ಇಂಡಿಯಾ ರನ್‌ಗಳ ಭಾರೀ ಅಂತರದಿಂದ ವಿಜಯ ಸಾಧಿಸಿದೆ.

ಮೂರನೇ ದಿನದಾಟದ ಅಂತ್ಯಕ್ಕೆ ಐದು ವಿಕೆಟ್ ಕಳೆದುಕೊಂಡು ಉಳಿದ ಐದು ವಿಕೆಟ್‌ಗಳಲ್ಲಿ 400 ರನ್‌ಗಳಿಸುವ ಅಸಾಧ್ಯ ಸವಾಲನ್ನು ಮುಂದಿಟ್ಟುಕೊಂಡು ನ್ಯೂಜಿಲೆಂಡ್ ನಾಲ್ಕನೇ ದಿನದಾಟವನ್ನು ಆರಂಭಿಸಿತ್ತು. ಆದರೆ ನಾಲ್ಕನೇ ದಿನ ಜಯಂತ್ ಯಾದವ್ ಸ್ಪಿನ್ ಸುಳಿಗೆ ಸಿಲುಕಿದ ನ್ಯೂಜಿಲೆಂಡ್ ಪಡೆ ಭಾರತಕ್ಕೆ ಸುಲಭ ತುತ್ತಾಯಿತು. 28 ರನ್‌ಗಳ ಅಂತರದಲ್ಲಿ ಕೊನೆಯ 5 ವಿಕೆಟ್ ಕಳೆದುಕೊಳ್ಳುವ ಮೂಲಕ ನ್ಯೂಜಿಲೆಂಡ್ ಭಾರತದ ವಿರುದ್ಧ ಭಾರೀ ಅಂತರದಿಂದ ಸೋಲು ಅನುಭವಿಸಿದೆ. ಈ ಮೂಲಕ ಭಾರತ ತವರಿನಲ್ಲಿ ನಡೆದ ಟಿ20 ಹಾಗೂ ಟೆಸ್ಟ್ ಸರಣಿಯಲ್ಲಿ ಒಂದೂ ಸೋಲು ಕಾಣದೆ ಗೆದ್ದು ಬೀಗಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.