ಪಂದ್ಯದ ವೇಳೆ ಆಸೀಸ್ ಯುವತಿಗೆ ಇಂಗ್ಲೆಂಡ್ ಅಭಿಮಾನಿಯ ಪ್ರೀತಿ ನಿವೇದನೆ; ಯುವತಿ ಓಕೆ ಅಂದಳಾ? ಈ ವಿಡಿಯೋ ವೈರಲ್
ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ಮಧ್ಯೆ ಆಶಸ್ ಮೊದಲ ಟೆಸ್ಟ್ ಪಂದ್ಯ ಬ್ರಿಸ್ಬೇನ್ ನಲ್ಲಿ ನಡೆಯುತ್ತಿದೆ. ಈ ಸಂದರ್ಭದಲ್ಲಿ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ ಆಡುವ ವೇಳೆ ಮೈದಾನದ ಹೊರಗೆ ಇಂಗ್ಲೆಂಡ್ ಕ್ರಿಕೆಟ್ ಅಭಿಮಾನಿಯೊಬ್ಬ ಆಸ್ಟ್ರೇಲಿಯಾದ ತನ್ನ ಗೆಳತಿಗೆ ಪ್ರೇಮ ನಿವೇದನೆ ಮಾಡಿಕೊಂಡಿದ್ದಾನೆ.

ಬ್ರಿಸ್ಬೇನ್: ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ಮಧ್ಯೆ ಆಶಸ್ ಮೊದಲ ಟೆಸ್ಟ್ ಪಂದ್ಯ ಬ್ರಿಸ್ಬೇನ್ ನಲ್ಲಿ ನಡೆಯುತ್ತಿದೆ. ಈ ಸಂದರ್ಭದಲ್ಲಿ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ ಆಡುವ ವೇಳೆ ಮೈದಾನದ ಹೊರಗೆ ಇಂಗ್ಲೆಂಡ್ ಕ್ರಿಕೆಟ್ ಅಭಿಮಾನಿಯೊಬ್ಬ ಆಸ್ಟ್ರೇಲಿಯಾದ ತನ್ನ ಗೆಳತಿಗೆ ಪ್ರೇಮ ನಿವೇದನೆ ಮಾಡಿಕೊಂಡಿದ್ದಾನೆ.
ಈ ವೇಳೆ ಆತನ ಪ್ರೀತಿಯನ್ನು ಇಂಗ್ಲೆಂಡ್ ನ ಗೆಳತಿ ಒಪ್ಪಿಕೊಂಡಿಳು. ಇದಾದ ಬಳಿಕ, ಪ್ರೀತಿಯ ಜ್ಞಾಪಕವಾಗಿ ಹುಡುಗಿ ಉಂಗುರ ತೊಟ್ಟಿರುವುದನ್ನು ಕಾಣಬಹುದು.
ಈ ಕುತೂಹಲಕಾರಿ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಲ್ಲದೆ, ಕ್ರಿಕೆಟ್ ಮೈದಾನದ ದೊಡ್ಡ ಪರದೆಯ ಮೇಲೆ ನೇರ ಪ್ರಸಾರಗೊಂಡಿತು. ಈ ವೇಳೆ ಗ್ರೌಂಡ್ ನಲ್ಲಿ ನೆರೆದಿದ್ದ ಕ್ರಿಕೆಟ್ ಅಭಿಮಾನಿಗಳು ನಟಾಲಿಯಾ ಹಾಗೂ ರಾಬ್ ಜೋಡಿಗೆ ಚಪ್ಪಾಳೆ ತಟ್ಟಿ ಇಬ್ಬರನ್ನು ಅಭಿನಂದಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ.
ಸೋಷಿಯಲ್ ಮೀಡಿಯಾ ಬಳಕೆದಾರರು ಕೂಡ ವಿಭಿನ್ನ ರೀತಿಯ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ. ಅಲ್ಲದೆ, ಪಂದ್ಯದ ವೇಳೆ ಇದೊಂದು ಉತ್ತಮ ಕ್ಷಣವಾಗಿತ್ತು ಅಂತಾ ಬಳಕೆದಾರರು ಕಮೆಂಟ್ ಮಾಡುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


