ಕ್ರಿಕೆಟ್

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಕನ್ನಡಿಗ ಕೆಎಲ್ ರಾಹುಲ್ ಟೀಮ್ ಇಂಡಿಯಾ ಉಪ ನಾಯಕ

ದಕ್ಷಿಣ ಆಫ್ರಿಕಾ ವಿರುದ್ಧದ ಮುಂಬರುವ ಮೂರು ಪಂದ್ಯಗಳ ಟೆಸ್ಟ್ ಸರಣಿಗೆ ಕೆಎಲ್ ರಾಹುಲ್ ಉಪ ನಾಯಕತ್ವದ ಕ್ಯಾಪ್ ತೊಡಲಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಕನ್ನಡಿಗ ಕೆಎಲ್ ರಾಹುಲ್ ಟೀಮ್ ಇಂಡಿಯಾ ಉಪ ನಾಯಕ
ಕೆ.ಎಲ್. ರಾಹುಲ್
Published On :

ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧದ ಮುಂಬರುವ ಮೂರು ಪಂದ್ಯಗಳ ಟೆಸ್ಟ್ ಸರಣಿಗೆ ಕೆಎಲ್ ರಾಹುಲ್  ಉಪ ನಾಯಕತ್ವದ ಕ್ಯಾಪ್ ತೊಡಲಿದ್ದಾರೆ. ರೋಹಿತ್ ಶರ್ಮಾ ಉಪನಾಯಕರಾಗುತ್ತಿದ್ದರು. ಆದರೆ, ಮಂಡಿರಜ್ಜು ಗಾಯದ ಸಮಸ್ಯೆಯಿಂದ ಅವರು ಸರಣಿಯಿಂದ ಹೊರಗಿರುವುದರಿಂದ ರಾಹುಲ್ ಉಪ ನಾಯಕರಾಗಲಿದ್ದು, ವಿರಾಟ್ ಕೊಹ್ಲಿಗೆ ಸಾಥ್ ನೀಡಲಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಗಾಗಿ ಕೆಎಲ್ ರಾಹುಲ್ ಉಪ ನಾಯಕರಾಗಲಿದ್ದಾರೆ ಎಂಬುದನ್ನು ಪ್ರಸ್ತುತದಲ್ಲಿನ ಬೆಳವಣಿಗೆ ಉಲ್ಲೇಖಿಸಿದ ಮೂಲಗಳು ಹೇಳಿವೆ. ರೋಹಿತ್ ಸರಣಿಯಿಂದ ಹೊರಗುಳಿಯಲಿದ್ದು, ಕೆಎಲ್ ರಾಹುಲ್ ಉಪನಾಯಕರಾಗಲಿದ್ದಾರೆ ಎಂದು ಮೂಲಗಳು ಹೇಳಿರುವುದಾಗಿ ಎನ್ ಎಐ ಸುದ್ದಿಸಂಸ್ಥೆ ವರದಿ ಮಾಡಿದೆ. 

ಗಾಯದ ಸಮಸ್ಯೆಯಿಂದಾಗಿ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯ ಮೂರು ಪಂದ್ಯಗಳಿಂದ ರೋಹಿತ್ ಶರ್ಮಾ ಹೊರಗುಳಿಯಲಿದ್ದಾರೆ ಎಂದು ಬಿಸಿಸಿಐ ಸೋಮವಾರ ಸ್ಪಷ್ಟಪಡಿಸಿತ್ತು.  ಅಭ್ಯಾಸದ ವೇಳೆಯಲ್ಲಿ ಎಡ ಮಂಡಿರಜ್ಜು ಗಾಯದಿಂದಾಗಿ ಟೀಂ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಗಾಯಗೊಂಡಿರುವುದಾಗಿ ಬಿಸಿಸಿಐ ಅಧಿಕೃತ ಹೇಳಿಕೆಯಲ್ಲಿ ತಿಳಿಸಿತ್ತು. 

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ರೋಹಿತ್ ಶರ್ಮಾ ಅವರು ಹೊರಗುಳಿಯಲಿದ್ದು, ಅವರ ಬದಲಿಗೆ ಪ್ರಿಯಾಂಕ್ ಪಂಚಾಲ್ ತಂಡ ಸೇರಲಿದ್ದಾರೆ ಎಂದು ಬಿಸಿಸಿಐ ಮಾಹಿತಿ ನೀಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.