ಆ್ಯಶಸ್: 3ನೇ ಟೆಸ್ಟ್ ಪಂದ್ಯದಲ್ಲೂ ಮುಗ್ಗರಿಸಿದ ಇಂಗ್ಲೆಂಡ್, ಮತ್ತೆ ಪ್ರಶಸ್ತಿ ಉಳಿಸಿಕೊಂಡ ದೈತ್ಯ ಆಸಿಸ್ ಪಡೆ
ಇಂಗ್ಲೆಂಡ್ ವಿರುದ್ಧ ಆ್ಯಶಸ್ ಟೆಸ್ಟ್ ಟೂರ್ನಿಯ ಮೂರನೇ ಪಂದ್ಯದಲ್ಲೂ ಆಸ್ಚ್ರೇಲಿಯಾ ಭರ್ಜರಿ ಜಯ ಗಳಿಸಿದ್ದು, ಸರಣಿಯನ್ನು ಇನ್ನೂ 2 ಪಂದ್ಯ ಬಾಕಿ ಇರುವಂತೆಯೇ ಕೈವಶ ಮಾಡಿಕೊಂಡಿದೆ.

ಮೆಲ್ಬೋರ್ನ್: ಇಂಗ್ಲೆಂಡ್ ವಿರುದ್ಧ ಆ್ಯಶಸ್ ಟೆಸ್ಟ್ ಟೂರ್ನಿಯ ಮೂರನೇ ಪಂದ್ಯದಲ್ಲೂ ಆಸ್ಚ್ರೇಲಿಯಾ ಭರ್ಜರಿ ಜಯ ಗಳಿಸಿದ್ದು, ಸರಣಿಯನ್ನು ಇನ್ನೂ 2 ಪಂದ್ಯ ಬಾಕಿ ಇರುವಂತೆಯೇ ಕೈವಶ ಮಾಡಿಕೊಂಡಿದೆ.
ಮೊದಲ ಇನ್ನಿಂಗ್ಸ್ ನಲ್ಲಿ 186ರನ್ ಗಳಿಗೆ ಇಂಗ್ಲೆಂಡ್ ತಂಡ ಆಲೌಟ್ ಆಗಿತ್ತು. ಬಳಿಕ ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ 267 ರನ್ ಕಲೆಹಾಕಿತ್ತು. ಆ ಮೂಲಕ 81 ರನ್ ಗಳ ಮುನ್ನಡೆ ಸಾಧಿಸಿತ್ತು. ಈ ಸವಾಲಿನ ಹಿನ್ನಡೆಯೊಂದಿಗೆ 2ನೇ ಬ್ಯಾಟಿಂಗ್ ಗೆ ಇಳಿದ ಇಂಗ್ಲೆಂಡ್ ತಂಡ ಕೇವಲ 68ರನ್ ಗಳಿಗೆ ಆಲೌಟ್ ಆಯಿತು. ಆ ಮೂಲಕ ಆಸ್ಟ್ರೇಲಿಯಾ ಇನ್ನಿಂಗ್ಸ್ ಮತ್ತು 14 ರನ್ ಗಳ ಜಯಗಳಿಸಿದೆ.
ಮೊದಲ ಇನ್ನಿಂಗ್ಸ್ ನಲ್ಲಿ ಕೇವಲ 1 ವಿಕೆಟ್ ಪಡೆದಿದ್ದ ಸ್ಕಾಟ್ ಬೊಲಾಂಡ್ ಎರಡನೇ ಇನ್ನಿಂಗ್ಸ್ ನಲ್ಲಿ 6 ವಿಕೆಟ್ ಪಡೆದ ಇಂಗ್ಲೆಂಡ್ ಪತನಕ್ಕೆ ಕಾರಣವಾದರು. ಆ ಮೂಲಕ ಇಂಗ್ಲೆಂಡ್ ಇನ್ನೂ 2 ಪಂದ್ಯಗಳನ್ನು ಬಾಕಿ ಇರುವಂತೆಯೇ ಆ್ಯಶಸ್ ಸರಣಿಯನ್ನು ಕಳೆದುಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


