ಕ್ರಿಕೆಟ್

ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ರಾಸ್ ಟೇಲರ್ ನಿವೃತ್ತಿ ಘೋಷಣೆ

ನ್ಯೂಜಿಲೆಂಡ್ ಮಿಡಲ್‌ ಆರ್ಡರ್‌ ಬ್ಯಾಟ್ಸ್‌ಮನ್ ರಾಸ್ ಟೇಲರ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಲಿದ್ದಾರೆ. ತವರಿನಲ್ಲಿ ಬಾಂಗ್ಲಾದೇಶ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿ ಮುಗಿಯುವ ಸಮಯದಲ್ಲಿ ಈ ಘೋಷಣೆ ಮಾಡಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ರಾಸ್ ಟೇಲರ್ ನಿವೃತ್ತಿ ಘೋಷಣೆ
ರಾಸ್ ಟೇಲರ್
Published On :

ಜಿಂಬಾಬ್ವೆ: ನ್ಯೂಜಿಲೆಂಡ್ ಮಿಡಲ್‌ ಆರ್ಡರ್‌ ಬ್ಯಾಟ್ಸ್‌ಮನ್ ರಾಸ್ ಟೇಲರ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಲಿದ್ದಾರೆ. ತವರಿನಲ್ಲಿ ಬಾಂಗ್ಲಾದೇಶ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿ ಮುಗಿಯುವ ಸಮಯದಲ್ಲಿ ಈ ಘೋಷಣೆ ಮಾಡಿದ್ದಾರೆ. 

ರಾಸ್‌ ಟೇಲರ್‌ ಈ ವಿಷಯವನ್ನು ಟ್ವೀಟರ್‌ ನಲ್ಲಿ ಬರದುಕೊಂಡಿದ್ದಾರೆ. ಇಂದು ನಾನು ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುತ್ತಿದ್ದೇನೆ, ನನ್ನ 17 ವರ್ಷಗಳ ಅದ್ಭುತವಾದ ಇನ್ನಿಂಗ್ಸ್ ಬೆಂಬಲಿಸಿದ್ದಕ್ಕಾಗಿ ಧನ್ಯವಾದಗಳು, ಎಂದು ಟೇಲರ್ ಹೇಳಿದ್ದಾರೆ. 

ರಾಸ್‌ 2006ರಲ್ಲಿ ವೆಸ್ಟ್‌ ಇಂಡೀಸ್‌ ವಿರುದ್ದ ಮೆಕ್ಲಿನ್‌ ಪಾರ್ಕ್‌ ನಡೆದ ಏಕ ದಿನ ಪಂದ್ಯದೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ ಪ್ರವೇಶಿಸಿದ್ದರು. ಈವರೆಗೆ ಅವರು 233 ಏಕದಿನ ಪಂದ್ಯಗಳಾಡಿದ್ದು 21 ಶತಕ ಒಳಗೊಂಡಂತೆ 8,576 ರನ್ ಗಳಿಸಿದ್ದಾರೆ.

ಟೇಲರ್ ಇನ್ನೂ ಎರಡು ಟೆಸ್ಟ್ ಪಂದ್ಯಗಳನ್ನು ಆಡಲಿದ್ದಾರೆ. ಅಂದರೆ 112 ಟೆಸ್ಟ್‌ಗಳಲ್ಲಿ ನ್ಯೂಜಿಲೆಂಡ್ ತಂಡವನ್ನು ಪ್ರತಿನಿಧಿಸಿದ ನಂತರ ಅವರು ನಿವೃತ್ತರಾಗಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.