ಕೋವಿಡ್ ಸೋಂಕಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್!
ಕೋವಿಡ್–19 ಸೋಂಕಿನಿಂದ ಬಳಲುತ್ತಿದ್ದ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಮನೆಯಲ್ಲೇ ಪ್ರತ್ಯೇಕ ವಾಸಕ್ಕೆ ಒಳಗಾಗಲಿದ್ದಾರೆ.

ಕೋಲ್ಕತ್ತಾ: ಕೋವಿಡ್–19 ಸೋಂಕಿನಿಂದ ಬಳಲುತ್ತಿದ್ದ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಮನೆಯಲ್ಲೇ ಪ್ರತ್ಯೇಕ ವಾಸಕ್ಕೆ ಒಳಗಾಗಲಿದ್ದಾರೆ.
ಈ ಬಗ್ಗೆ ಗಂಗೂಲಿ ಕುಟುಂಬದ ಆಪ್ತ ಮೂಲಗಳು ತಿಳಿಸಿದ್ದು, ಗಂಗೂಲಿ ಅವರ ಆರ್‌ಟಿ–ಪಿಸಿಆರ್ ವರದಿ ಸೋಮವಾರ ಪಾಸಿಟಿವ್ ಬಂದಿತ್ತು. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಅವರನ್ನು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಸ್ತುತ ಗಂಗೂಲಿ ಆರೋಗ್ಯ ಸ್ಥಿರವಾಗಿರುವುದಾಗಿ ಆಸ್ಪತ್ರೆಯ ವೈದ್ಯರು ಬುಧವಾರ ತಿಳಿಸಿದ್ದರು.ಇದೀಗ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.
ಗಂಗೂಲಿ ಅವರು ಈ ವರ್ಷ ಮೂರನೇ ಬಾರಿಗೆ ಆಸ್ಪತ್ರೆಗೆ ದಾಖಲಾಗಿ ಬಿಡುಗಡೆಯಾಗಿದ್ದಾರೆ. ಈ ಹಿಂದೆ ಜನವರಿಯಲ್ಲಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೊದಲ ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಮನೆಯಲ್ಲಿ ದೈಹಿಕ ಕಸರತ್ತು ನಡೆಸುತ್ತಿದ್ದಾಗ ಅವರಿಗೆ ಲಘು ಹೃದಯಾಘಾತವಾಗಿತ್ತು. ಹೃದಯದ ರಕ್ತನಾಳಗಳಲ್ಲಿ ಬ್ಲಾಕ್‌ಗಳು ಕಾಣಿಸಿಕೊಂಡಿದ್ದರಿಂದ ಅವರಿಗೆ ಆ್ಯಂಜಿಯೊಪ್ಲಾಸ್ಟಿ ನಡೆಸಿ ಒಂದು ಕಡೆ ಸ್ಟಂಟ್ ಆಳವಡಿಸಲಾಗಿತ್ತು. 20 ದಿನಗಳ ಬಳಿಕ ಮತ್ತೊಮ್ಮೆ ಎದೆನೋವು ಕಾಣಿಸಿಕೊಂಡಿತ್ತು. ಹೀಗಾಗಿ ಜನವರಿ 28ರಂದು ಮತ್ತೊಮ್ಮೆ ಆ್ಯಂಜಿಯೊಪ್ಲಾಸ್ಟಿ ಮಾಡಿ ಇನ್ನೊಂದು ಸ್ಟಂಟ್ ಅಳವಡಿಸಲಾಗಿತ್ತು. ಸಂಪೂರ್ಣ ಗುಣಮುಖರಾದ ಬಳಿಕ ಮಾರ್ಚ್‌ನಲ್ಲಿ ಕರ್ತವ್ಯಕ್ಕೆ ಮರಳಿದ್ದರು.
ಬಳಿಕ ಅವರು ಕೋವಿಡ್ ಸೋಂಕಿಗೆ ತುತ್ತಾಗಿ ಕೋಲ್ಕತಾ ವುಡ್ ಲ್ಯಾಂಡ್ ಆಸ್ಪತ್ರೆಗೆ ದಾಖಲಾಗಿದ್ದರು. ಅಂದಹಾಗೆ ಸೌರವ್ ಗಂಗೂಲಿ ಎರಡು ಡೋಸ್ ಕೋವಿಡ್ ಲಸಿಕೆ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


